ವಿಕಲಚೇತನರ ದಿನಾಚರಣೆ ನಾಳೆ
ದೊಡ್ಡಬಳ್ಳಾಪುರ: ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ, ಸೂರ್ಯೋದಯ ಅಂಗವಿಕಲರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಡಿ.31ರ ಮಂಗಳವಾರ ಬೆಳಗ್ಗೆ 11.30ಕ್ಕೆ ಒಕ್ಕಲಿಗರ ಭವನದಲ್ಲಿ ನಡೆಯಲಿದೆ.
ಶಾಸಕ ಟಿ.ವೆಂಕಟರಮಣಯ್ಯ ಉದ್ಘಾಟಿಸಲಿದ್ದು, ತಹಸೀಲ್ದಾರ್ ಸಿದ್ಧಲಿಂಗಯ್ಯ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಜಿ.ಪಂ ಅಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷ ಹನುಮಂತಗೌಡ, ತಾ.ಪಂ ಅಧ್ಯಕ್ಷೆ ನರಸಮ್ಮ ಮತ್ತಿತರರು ಭಾಗವಹಿಸಲಿದ್ದಾರೆ.
ಕನ್ನಡ ರಾಜ್ಯೋತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಪುನೀತ್ ರಾಜ್ಕುಮಾರ್ ಕನ್ನಡ ಯುವಕ ಸಂಘದ ನೇತೃತ್ವದಲ್ಲಿ ಡಿ.30ರ ಸೋಮವಾರ ಬೆಳಗ್ಗೆ 10 ಗಂಟೆಗೆ ರಾಜ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಿಪಿಐ ಶಿವಾರೆಡ್ಡಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಂಘದ ಗೌರವಾಧ್ಯಕ್ಷ ಡಿ.ಎನ್. ತಿಮ್ಮರಾಜು, ಸಲಹೆಗಾರ ಕಂಬಿನಂಜಪ್ಪ, ನಾರಾಯಣಸ್ವಾಮಿ, ಅಧ್ಯಕ್ಷ ಮಂಜುನಾಥ್ ಮತ್ತಿತರರು ಭಾಗವಹಿಸಲಿದ್ದಾರೆ.