ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನ
ರಾಮನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ ರು.3 ಸಾವಿರದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಹ ವಿದ್ಯಾರ್ಥಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು 2013-14ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರಬೇಕು. 2013ನೇ ವರ್ಷದ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು. ಈ ಅವಧಿಯಲ್ಲಿ ನೋಂದಾಯಿತ ಕ್ರೀಡಾ ಸಂಸ್ಥೆಗಳು ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು.
ಅರ್ಜಿ ಸಲ್ಲಿಸಲು ಜ.20 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರಾಮನಗದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಖುದ್ದಾಗಿ ಅಥವಾ ದೂ 080-27274655 ಸಂಪರ್ಕಿಸಬಹುದು.