ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪಕೃತಿ ವಿಕೋಪ ಎದುರಿಸಲು ನಾಗರಿಕರು ಸಜ್ಜಾಗಲಿ: ಎಎಸ್ಪಿ

Rashmi Kasaragodu
Updated On : 31 Dec 2013, 2:17 am

ರಾಮನಗರ: ಪಕೃತಿ ವಿಕೋಪಗಳನ್ನು ಎದುರಿಸಲು ನಾಗರಿಕರು ಸಕಲ ರೀತಿಯಲ್ಲೂ ಸಜ್ಜಾಗಬೇಕು. ವಿಪತ್ತಿನ ಸಂದರ್ಭದಲ್ಲಿ ವದಂತಿಗಳಿಗೆ ಕಿವಿಗೊಡದೆ ಸಂಯಮ ಕಾಪಾಡಿಕೊಂಡರೆ ಹೆಚ್ಚಿನ ಪ್ರಾಣ ಹಾನಿ ತಪ್ಪಿಸಬಹುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ಸಿಂಗ್ ಹೇಳಿದರು. ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ವಿಪತ್ತು ಕಡಿಮೆಗೊಳಿಸುವ ದಿನಾಚರಣೆ 2013ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭೂಕಂಪ, ನೆರೆಹಾವಳಿ, ಬರಗಾಲ ಮುಂತಾದ ಪ್ರಕೃತಿ ವಿಕೋಪಗಳು, ಅಪಘಾತ, ಯುದ್ಧ ಸೇರಿದಂತೆ ಇನ್ನಿತರೆ ವಿಪತ್ತಿನ ವೇಳೆ ಜನರು ಸರ್ಕಾರದ ಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಜತೆ ಸಹಕರಿಸಬೇಕು ಎಂದರು. ವಿಪತ್ತುಗಳು ಎದುರಾದ ಸಂದರ್ಭದಲ್ಲಿ ಸರ್ಕಾರ ನೀಡುವ ಸೂಚನೆಗಳನ್ನು ಪಾಲಿಸುವುದು, ಸುರಕ್ಷತಾ ಕ್ರಮಗಳ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ವಿಪತ್ತು ಕಡಿಮೆಗೊಳಿಸುವ ದಿನಾಚರಣೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಜಿಲ್ಲಾಡಳಿತ, ಜಿಲ್ಲಾ ಅಗ್ನಿಶಾಮಕ ದಳ ಮತ್ತು ಪೊಲೀಸ್ ಅಧಿಕಾರಿಗಳ ಸಹಕಾರದಲ್ಲಿ ಪ್ರತಿ ವರ್ಷ ರಾಷ್ಟ್ರೀಯ ವಿಪತ್ತು ಕಡಿತಗೊಳಿಸುವ ದಿನಾಚರಣೆಯನ್ನು ಗೃಹ ರಕ್ಷಕ ದಳ ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳು ಮತ್ತು ಗೃಹ ರಕ್ಷಕ ಸಿಬ್ಬಂದಿ ರ್ಯಾಲಿ ನಡೆಸುವುದರ ಮೂಲಕ ಜನರಲ್ಲಿ ವಿಪತ್ತುಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement