ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
ದೇವನಹಳ್ಳಿ: ಕರ್ನಾಟಕ ಮಾದಿಗ ದಂಡೋರ ಮತ್ತು ಮಾದಿಗ ವಿದ್ಯಾರ್ಥಿ ಪರಿಷತ್ ವತಿಯಿಂದ 2012-13 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ , ಪಿಯುಸಿ, ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ, ತಾಂತ್ರಿಕ ಶಿಕ್ಷಣ ಮತ್ತು ಪಿಎಚ್ಡಿ ಪದವಿ ಪಡೆದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲ ಮಾದಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದರಿಂದ ವಿದ್ಯಾರ್ಥಿಗಳು ತಮ್ಮ ಅರ್ಹತಾ ಪಟ್ಟಿಯೊಂದಿಗೆ ಕರ್ನಾಟಕ ಮಾದಿಗ ದಂಡೋರ ಸಮಿತಿ, ಗೋಪಾಲಪುರ ಎಂ. ಮುನಿರಾಜು, (9341206127) ಬೆಂ.ಗ್ರಾಮಾಂತರ ಜಿಲ್ಲಾಧ್ಯಕ್ಷ. ಕೆ.ಜಿ.ಗೌರಿಶಂಕರ್, (9844459965) ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಹಾಗೂ ಎಂ.ನಾರಾಯಣಸ್ವಾಮಿ (9343871424), ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬೇಕೆಂದು ಮಾದಿಗ ದಂಡೋರ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ವಿ. ರವಿವರ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.