ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಡಿ.ಕೆ.ಶಿವಕುಮಾರ್ಗೆ ಪಿತೃವಿಯೋಗ

Rashmi Kasaragodu
Updated On : 1 Jan 2014, 1:00 am

ಕನಕಪುರ: ಶಾಸಕ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ತಂದೆ ದೊಡ್ಡಾಲಹಳ್ಳಿ ಡಿ.ಕೆ.ಕೆಂಪೇಗೌಡ(87) ಅವರು ತೀವ್ರ ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.
 ಅವರಿಗೆ ಪತ್ನಿ ಗೌರಮ್ಮ, ಮಗಳು ಮಂಜುಳಾ ಇದ್ದಾರೆ.
ಶಾಸಕ ಡಿ.ಕೆ.ಶಿವಕುಮಾರ್ ಅವರು ನಾಳೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆಂಬ ಸುದ್ದಿಯ ಹಿನ್ನೆಲೆಯಲ್ಲಿ ಸಂತೋಷದಲ್ಲಿ ಮುಳುಗಿದ್ದ ಕನಕಪುರದ ನಾಗರಿಕರಿಗೆ ನಿಧನದ ವಾರ್ತೆ ಬರಸಿಡಿಲಿನಂತೆ ಬಂದೆರಗಿತು.  ಕಳೆದ 15 ದಿನಗಳಿಂದ ತೀವ್ರ ಅಸ್ವಸ್ಥರಾಗಿ ಅವರು ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಕೆಂಪೇಗೌಡರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ವಾಹನದಲ್ಲಿ ತಂದು ಕನಕಪುರ ಹಾಗೂ ದೊಡ್ಡಾಲಹಳ್ಳಿಯಲ್ಲಿ ಮೆರವಣಿಗೆ ನಡೆಸಲಾಯಿತು. ಸಾವಿರಾರು ಮಂದಿ ನಾಗರಿಕರು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಕೆಂಪೇಗೌಡರ ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿನ ತೋಟದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.  ಅಂತ್ಯಸಂಸ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ, ಕಟ್ಟಾಸುಬ್ರಹ್ಮಣ್ಯ ನಾಯ್ಡು, ವೀರಣ್ಣ ಮತ್ತೀಕಟ್ಟಿ, ಮಾಜಿ ಶಾಸಕ  ಹಸನಬ್ಬ, ಮರಿದೇವರು, ರಘುನಂದನ್ ರಾಮಣ್ಣ, ಪಿ. ಶೇಷಾದ್ರಿ, ಎ.ಮಂಜು ಮೊದಲಾದವರು ಪಾಲ್ಗೊಂಡು ಶ್ರದ್ಧಾಂಜಲಿ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement