ಬಿ. ಉಮೇಶ್ ಜೆಡಿಎಸ್ ರಾಜ್ಯ ಕಾರ್ಯದರ್ಶಿ
ರಾಮನಗರ: ಇಲ್ಲಿನ ನಗರಸಭೆಯ ಮಾಜಿ ಉಪಾಧ್ಯಕ್ಷ ಬಿ.ಉಮೇಶ್ ಅವರನ್ನು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಸೂಚನೆ ಮೇರೆಗೆ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಅವರು ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಬಿ.ಉಮೇಶ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನನ್ನ ಮೇಲೆ ಇರಿಸಿ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವುದಾಗಿ ತಿಳಿಸಿದ್ದಾರೆ.