ಅಕ್ರಮ ಮರಳುಗಾರಿಕೆ; 2 ಜೆಸಿಬಿ ಪೊಲೀಸ್ ವಶ
ರಾಮನಗರ: ತಾಲೂಕಿನ ಕೂಟಗಲ್ ಹೋಬಳಿ ತಿಮ್ಮಸಂದ್ರ ಬಳಿಯ ಅಕ್ರಮ ಮರಳುಗಾರಿಕೆ ಮೇಲೆ ಶುಕ್ರವಾರ ಮುಂಜಾನೆ ದಾಳಿ ನಡೆಸಿದ ಪೊಲೀಸರು ದಂಧೆಯಲ್ಲಿ ತೊಡಗಿದ್ದ 2 ಜೆಸಿಬಿ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅರ್ಕಾವತಿ ನದಿಯಲ್ಲಿ ಮರಳುಗಾರಿಕೆ ಬಗ್ಗೆ ದೊರೆತ ಖಚಿತ ಮಾಹಿತಿಯನ್ನಾಧರಿಸಿ ರಾಮನಗರ ಗ್ರಾಮಾಂತರ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ದಾಳಿ ನಡೆಸಿದರು. ವಿಷಯ ತಿಳಿಯುತ್ತಿದ್ದಂತೆಯೇ ಮರಳುಗಾರಿಕೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿ 2 ಜೆಸಿಬಿ ಯಂತ್ರಗಳನ್ನು ಬಿಟ್ಟು ಹೋಗಿದ್ದು, ಅವೆರಡಕ್ಕೂ ನಂಬರ್ ಪ್ಲೇಟ್ ಇರುವುದಿಲ್ಲ. ಒಂದು ಜೆಸಿಬಿಯ ಎಂಜಿನ್ ಮೇಲಿನ ನಂ. ಎಚ್00025095, ಚಾರ್ಸಿ ನಂ.1828065, ಮತ್ತೊಂದು ಎಂಜಿನ್ ನಂ.ಎಚ್00034152, ಚಾರ್ಸಿ ನಂ.1832890 ಆಗಿರುತ್ತದೆ. ಈ ಸಂಬಂಧ ದೂರು ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.