ಬೆಂಗಳೂರು ಗ್ರಾಮಾಂತರ

ಇಂದು ಬೆಟ್ಟಹಳ್ಳಿಯಲ್ಲಿ ಜನಸ್ಪಂದನ ಸಭೆ

ಸೂಲಿಬೆಲೆ: ಇಲ್ಲಿಗೆ ಸಮೀಪದ ಬೆಟ್ಟಹಳ್ಳಿಯಲ್ಲಿ ಹೋಬಳಿ ಮಟ್ಟದ ಜನಸ್ಪಂದನೆ ಸಭೆಯನ್ನು ಫೆ.2 ರಂದು ಹಮ್ಮಿಕೊಳ್ಳಲಾಗಿದೆ ಎಂದು ನಾಡಕಚೇರಿ ಮೂಲಗಳು ತಿಳಿಸಿವೆ.
ತಹಶೀಲ್ದಾರ್ ಮಲ್ಲಿಕಾರ್ಜುನ್, ಕಾರ್ಯನಿರ್ವಣಾಧಿಕಾರಿಗಳಾದ ಕೃಷ್ಣಪ್ಪ ಲೋಹಾರ, ಗಿಡ್ಡಪ್ಪನಹಳ್ಳಿ ಗ್ರಾಪಂ ಅಧ್ಯಕ್ಷ ಸೀನಪ್ಪ ಸೇರಿದಂತೆ ಸ್ಥಳಿಯ ಚುನಾಯಿತ ಸದಸ್ಯರು ಭಾಗವಹಿಸಲಿದ್ದಾರೆ.ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಸಭೆಯಲ್ಲಿ  ಅಧಿಕಾರಿಗಳಿಗೆ ಸಲ್ಲಿಸಿ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
5 ರಿಂದ ಬೃಹತ್ ವಿಜ್ಞಾನ ಮೇಳ
ರಾಮನಗರ: ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ, ಸರ್ವಶಿಕ್ಷಣ ಅಭಿಯಾನ ಹಾಗೂ ರಾಮನಗರ-ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರದಿಂದ ಫೆ.5 ಮತ್ತು 6ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೃಹತ್ ವಿಜ್ಞಾನ ಮೇಳ ನಡೆಯಲಿದೆ.
ಮೇಳದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಖಗೋಳಶಾಸ್ತ್ರ, ಪರಿಸರ ಶಾಸ್ತ್ರ, ಪವಾಡ ರಹಸ್ಯ ಬಯಲು ಅಗ್ನಿಶಾಮಕ ದಳದ ಅಣಕು ನೋಟ ಪ್ರದರ್ಶನ, ವಿನೋದ ಗಣಿತ, ವಿಜ್ಞಾನ ಮಾದರಿಗಳ ಬಗ್ಗೆ ಪ್ರತ್ಯೇಕ ವಿಭಾಗಗಳನ್ನು ತೆರೆದು ಸುಮಾರು 175ಕ್ಕೂ ಅಧಿಕ ಮಾದರಿಗಳನ್ನು ಪ್ರದರ್ಶಿಸಲಾಗುವುದು.
ಶಾಲಾ ಮಕ್ಕಳು, ಜಿಲ್ಲೆಯ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ವೈವಿಧ್ಯಮಯ ವೈಜ್ಞಾನಿಕ ಮಾದರಿಗಳನ್ನು ವೀಕ್ಷಿಸುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಅಗಸ್ತ್ಯ ವಿಜ್ಞಾನ ಕೇಂದ್ರದ ಮುಖ್ಯಸ್ಥ ಮಲ್ಲಪ್ಪ ಎನ್. ದೊಡ್ಡಮನಿ ಮತ್ತಿತರರು ಈ ಸಂದರ್ಭದಲ್ಲಿಪ್ರಕಟಣೆಯಲ್ಲಿ ಕೋರಿದ್ದಾರೆ.
ರಾಮು ಪುತ್ರ ಭಗತ್ ಕಾಂಗ್ರೆಸ್‌ನಿಂದ ಅರ್ಜಿ
ಚನ್ನಪಟ್ಟಣ: ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿ  ಮಾಜಿ ಶಾಸಕ ಡಿ.ಟಿ.ರಾಮು ಪುತ್ರ ಡಿ.ಆರ್. ಭಗತ್ ರಾಮ್ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಸಮಾಜಸೇವೆಯಲ್ಲೂ ತೊಡಗಿಕೊಂಡಿದ್ದು ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಬಿ ಫಾರಂಗಾಗಿ ಅರ್ಜಿ ಸಲ್ಲಿಸಿದ್ದಾರೆ. ನನ್ನ ತಂದೆ ಡಿ.ಟಿ.ರಾಮು ಅವರ ತತ್ವಾದರ್ಶಗಳಡಿಯಲ್ಲಿ ಜನಸೇವೆ ಮಾಡುವ ಹೆಬ್ಬಯಕೆಯೊಂದಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಇಚ್ಚಿಸಿದ್ದು ಮುಂದಿನ ವಾರದಿಂದ ತಾಲೂಕಿನಲ್ಲಿ ಪ್ರವಾಸ ಕೈಗೊಂಡು ಜನಾಭಿಪ್ರಾಯ ಸಂಗ್ರಹಿಸುವುದಾಗಿ ತಿಳಿಸಿದ್ದಾರೆ. ನಮ್ಮ ತಂದೆ ಕಾಲದಿಂದ ಪಕ್ಷದಲ್ಲಿ ಗುರುತಿಸಿರುವ ಎಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಭೇಟಿಯಾಗಿಪಕ್ಷದಲ್ಲಿ ಸಕ್ರಿಯ ಗೊಳಿಸುವುದು, ಕ್ಷೇತ್ರದ ಜನತೆಯ ಕುಂದು ಕೊರತೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!