ಕೆಜೆಪಿ ಸೇರುವ ಪ್ರಶ್ನೆಯೇ ಇಲ್ಲ: ಯೋಗೇಶ್ವರ್
ಮಾಗಡಿ: ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಉತ್ತಮ ಬಜೆಟ್ ಮಂಡಿಸಲಿದ್ದಾರೆ ಎಂದು ಅರಣ್ಯ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದರು.
ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮುಖ್ಯಮಂತ್ರಿ ಈ ಬಾರಿ ಉತ್ತಮ ಬಜೆಟ್ ಮಂಡಿಸಲಿದ್ದು, ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದರು.
ಕೆಜೆಪಿ ಸೇರ್ಪಡೆಯಾಗುತ್ತೀರಾ ಎಂಬ ಪ್ರಶ್ನೆಗೆ ನಾನು ಕೆಜೆಪಿ ಸೇರುವ ಪ್ರಶ್ನೆಯೇ ಇಲ್ಲ. ಈಗ ನನಗೆ ರಾಜಕೀಯವಾಗಿ ವಿಶ್ರಾಂತಿ ಬೇಕಾಗಿದೆ. ಆದರೆ ರಾಜಕೀಯದಿಂದ ನಿವೃತ್ತಿಯಲ್ಲ ಎಂದು ಉತ್ತರಿಸಿದರು.
ಚನ್ನಪಟ್ಟಣದ ಸುಮಾರು 17 ಕೆರೆಗಳಿಗೆ ನೀರು ತುಂಬಿಸಿದ್ದೇನೆ. ಬಹುತೇಕ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಹೆಚ್ಚಿದೆ. ಮಾಗಡಿ ತಾಲೂಕಿಗೂ ಏತ ನೀರಾವರಿ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ದವಾಗಿದ್ದು, ಟೆಂಡರ್ ್ಹಂತದಲ್ಲಿದೆ ಎಂದ ಸಚಿವರು ಸಾವನದುರ್ಗದ ವನಧಾಮ ಅಭಿವೃದ್ಧಿಗೆ ಹಣ ಮಂಜೂರಾತಿ ನೀಡಿದ್ದೇನೆ ಎಂದರು.
ಜಯಂತ್ಯುತ್ಸವದಲ್ಲಿ ಭಾಗಿಯಾಗದ ಅರಣ್ಯ ಸಚಿವ: ಮಾಗಡಿ ಕೆಂಪೇಗೌಡ ಕೋಟೆ ಮೈದಾನದಲ್ಲಿ ಶುಕ್ರವಾರ ನಡೆಯುತ್ತಿದ್ದ ನಾಡಪ್ರಭು ಕೆಂಪೇಗೌಡರ 503ನೇ ಅದ್ದೂರಿ ಜಯಂತ್ಯುತ್ಸವದಲ್ಲಿ ಪಾಲ್ಗೊಳ್ಳಲು ಸಿಪಿವೈ ಆಗಮಿಸಿದ್ದರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ.
ಇದು ಸಾರ್ವಜನಿಕವಾಗಿ ನಾಡಪ್ರಭು ಕೆಂಪೇಗೌಡರ 503ನೇ ಜಯಂತ್ಯುತ್ಸವ ಅಂದುಕೊಂಡಿದ್ದೆ. ಆದರೆ ಇಲ್ಲಿ ನಡೆಯುತ್ತಿರುವುದು ಕಾಂಗ್ರೆಸ್‌ನ ಕೆಂಪೇಗೌಡ ಜಯಂತ್ಯುತ್ಸವ ಎಂದು ಗೊತ್ತಾದ ಹಿನ್ನೆಲೆಯಲ್ಲಿ ವೇದಿಕೆಗೆ ಹೋಗಲಿಲ್ಲ. ವಾಪಸ್ಸಾಗುತ್ತಿದ್ದೇನೆ ಎಂದಷ್ಟೆ ಸಚಿವರು ವಿವರಿಸಿದರು. ಕೃಷಿಕ ಸಮಾಜದ ಅಧ್ಯಕ್ಷ ಕೆ.ಎಚ್.ಕೃಷ್ಣಮೂರ್ತಿ, ಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಟಿ.ಸಿ. ನಾರಾಯಣಸ್ವಾಮಿ, ಆಯ್ಯಂಡಳ್ಳಿ ರಂಗಸ್ವಾಮಿ, ಮುಖಂಡರಾದ ಅಶ್ವಥ್,ಕಾರ್ಮಿಕ ಸಂಘಟನೆಯ ಬಸವರಾಜು, ಮೂರ್ತಿ, ನಾಗರಾಜು ಇತರರು ಇದ್ದರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.