ದೇವನಹಳ್ಳಿಯ ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ದೇವನಹಳ್ಳಿ: ದೇವನಹಳ್ಳಿ ಪಟ್ಟಣದ ವಿವಿಧ ಪಕ್ಷಗಳ ನೂರಾರು ಮಂದಿ ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ ಸಮಾರಂಭ ಸಾದಹಳ್ಳಿ ಬಳಿ ಇರುವ ಜೇಡ್ ಗಾರ್ಡನ್ನಲ್ಲಿ ಭಾನುವಾರ ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಮುಖಂಡರು ಆಯೋಜಿಸಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಬಚ್ಚೇಗೌಡ ಮಾತನಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲ ಕಾರ್ಯಕರ್ತರು ಯತ್ನಿಸಬೇಕು ಎಂದರು.
ಶಾಸಕ ವೆಂಕಟಸ್ವಾಮಿ ಮಾತನಾಡಿ ರಾಜ್ಯದಲ್ಲಿ ನಮ್ಮ ಸರ್ಕಾರ ಇಲ್ಲದೇ ಇದ್ದರೂ ನಮ್ಮ ಕ್ಷೇತ್ರದಲ್ಲಿ ಕೋಟ್ಯಂತರ ರು.ಗಳ ಕಾಮಗಾರಿ ಆಗಿದೆ ಮತ್ತು ಆಗುತ್ತಿವೆ. ಮುಂದಿನ ದಿನಗಳಲ್ಲಿ 85 ಬೃಹತ್ ಕೈಗಾರಿಕೆಗಳು ಬರಲಿದ್ದು ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆ ಬರಲಿದೆ ಎಂದರು. ಕಾಂಗ್ರೆಸ್ ಧ್ಯೇಯ ಸಿದ್ಧಾಂತ ಒಪ್ಪಿ ಬಂದಿರುವ ಎಲ್ಲ ಕಾರ್ಯಕರ್ತರನ್ನು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕ ಅಧ್ಯಕ್ಷ ಎ.ಚಿನ್ನಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್, ಜಿಲ್ಲಾ ಪಟ್ಟಣ ಕಾಂಗ್ರೆಸ್ ಅಧ್ಯಕ್ಷ ಎಸ್.ಸಿ. ಚಂದ್ರಪ್ಪ, ಪುರಸಭಾಧ್ಯಕ್ಷ ಎ.ಎನ್. ವಸಂತಬಾಬು, ಪುರಸಭಾ ಮಾಜಿ ಸದಸ್ಯ ಅಶ್ವತ್ಥನಾರಾಯಣ್, ಚಂದ್ರಶೇಖರ್ ಮಾತನಾಡಿ ದೇವನಹಳ್ಳಿ ಪುರಸಭೆಯ ಎಲ್ಲ 23 ವಾರ್ಡ್ಗಳಲ್ಲಿ ಕಾಂಗ್ರೆಸ್ ಸದಸ್ಯರು ಗೆಲ್ಲಲೇ ಬೇಕು. ಅಲ್ಲದೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು.
ಇದೇ ಸಂಧರ್ಭದಲ್ಲಿ ತಾಲೂಕು ಪಂಚಾಯಿತ ಮಾಜಿ ಅಧ್ಯಕ್ಷ ಬಿ.ಚಂದ್ರಯ್ಯ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರಸ್ ಎಸ್ಟಿ ಘಟಕ ಅಧ್ಯಕ್ಷ ಮಜ್ಜಿಗೆ ಹೊಸಹಳ್ಳಿ ವೆಂಕಟೇಶ್, ಉಪಾಧ್ಯಕ್ಷ ಮುನಿಕೃಷ್ಣಪ್ಪ ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.