'ನೇತಾಜಿ ವಿಚಾರಧಾರೆ ಯುವಕರಿಗೆ ಸ್ಫೂರ್ತಿಯಾಗಲಿ'
ಸೂಲಿಬೆಲೆ: ನೇತಾಜಿ ಸುಭಾಶ್ಚಂದ್ರಬೋಸ್ ಅವರ ವಿಚಾರಧಾರೆಗಳು ಯುವಕರಿಗೆ ಸ್ಫೂರ್ತಿಯಾಗಿ ಉತ್ತಮ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶನವಾಗಲಿ ಎಂದು ಭಾರತ್ ಸ್ಕೌಟ್ಸ್ ಗೈಡ್ಸ್ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶರಣಪ್ಪ ಕಂಬಳಿ ಹೇಳಿದ್ದಾರೆ.
ಸೂಲಿಬೆಲೆ ಶಾರದ ಮಂದಿರದ ಮನೆಯಂಗಳದಲ್ಲಿ ಹಮ್ಮಿಕೊಂಡಿದ್ದ ನೇತಾಜಿ ಸುಭಾಶ್ಚಂದ್ರಬೋಸ್ ಜನ್ಮ ದಿನಾಚರಣೆ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪದವಿ ಕಾಲೇಜು ಉಪನ್ಯಾಸಕ ನಾರಾಯಣಸ್ವಾಮಿ ಗಣರಾಜ್ಯೋತ್ಸವ ಮಹತ್ವವನ್ನು ತಿಳಿಸಿಕೊಟ್ಟರು. ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಯುವಕರು ದೇಶದ ಶಕ್ತಿಯಾಗಿದ್ದಾರೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸಬೇಕಾದ ಕರ್ತವ್ಯ ಪ್ರತಿಯೊಬ್ಬರ ಮೇಲಿದೆ. ನೇತಾಜಿಯವ ಧೈರ್ಯ ಸಾಹಸಗಳು ಯುವಕರಿಗೆ ಸ್ಫೂರ್ತಿಯಾಗಲಿವೆ ಎಂದರು.
ಸೂಲಿಬೆಲೆ ಪೊಲೀಸ್ ಠಾಣೆ ಪಿಎಸ್ಐಗಳಾದ ಬಿ.ರಾಜಣ್ಣ, ನವೀನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೂ.ರಂ. ರಾಮಯ್ಯ, ನಿವೃತ್ತ ಮುಖ್ಯ ಶಿಕ್ಷಕ ಸುಬ್ರಾಯ್ ಸೇಠ್, ವೆಂಕಟೇಗೌಡ, ಮುನಿರಾಜ್, ವೀರ ಮದಕರಿನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ವೈ. ನಾಗರಾಜ್, ಆಶ್ವತ್ಥ್, ಹಿರಿಯ ಪತ್ರಕರ್ತ ಎಸ್.ಕೆ ವಸಂತ ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.