ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಕೀಳರಿಮೆ ಬಿಡಿ: ನಾಗರಾಜು

Parashurama
Updated On : 1 Feb 2013, 11:43 am

ನೆಲಮಂಗಲ: ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಖಾಸಗಿ ಶಾಲಾ ವಿದ್ಯಾರ್ಥಿಗಳಿಗಿಂತ ಪೈಪೋಟಿ ನೀಡುತ್ತೇವೆ ಎಂಬ ಭರವಸೆಯೊಂದಿಗೆ ವಿದ್ಯಾಭ್ಯಾಸದಲ್ಲಿ ತಮ್ಮನ್ನು ತಾವು ಅರ್ಪಿಸಿಕೊಳ್ಳಬೇಕು  ಎಂದು ಶಾಸಕ ಎಂ.ವಿ.ನಾಗರಾಜು ಹೇಳಿದರು.
ಅವರು ಗುರುವಾರ ಪಟ್ಟಣದ ಕೋಟೆ ಬೀದಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 86ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
 ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ತಮ್ಮ ಮನಸ್ಸಿನಲ್ಲಿ ಕೀಳರಿಮೆ ಭಾವನೆ ಬೆಳೆಸಿಕೊಳ್ಳದೇ ಖಾಸಗಿ ಶಾಲಾ ಮಕ್ಕಳೊಂದಿಗೆ ಪ್ರತೀ ರಂಗದಲ್ಲೂ ನೇರ ಸ್ಪರ್ಧೆಯೊಡ್ಡಬೇಕು ಎಂದು ಕರೆ ನೀಡಿದರು.
ಶಾಲೆಯು ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾಗಿದ್ದು, ಬಹುತೇಕ ಭಾಗ ಶಿಥಿಲಗೊಂಡಿದೆ. ಶೀಘ್ರವೇ ನೂತನ ಕಟ್ಟಡ ನಿರ್ಮಾಣಕ್ಕೆ ಸಹಕರಿಸುವುದಾಗಿ ಭರವಸೆ ನೀಡಿದರು.
ಪುರಸಭೆ ಮಾಜಿ ಉಪಾಧ್ಯಕ್ಷ ಎನ್.ಪಿ. ಹೇಮಂತ್‌ಕುಮಾರ್ ಮಾತನಾಡುತ್ತಾ ಸರ್ಕಾರಿ ಶಾಲಾ ಮಕ್ಕಳು ತಮ್ಮ ಶಿಕ್ಷಣ ಹಾಗೂ ಕಲಿಕೆಗೆ ಸಮಸ್ಯೆಗಳು ಎದುರಾದರೆ ಸಂಬಂಧಪಟ್ಟ ಶಿಕ್ಷಕರು, ಜನಪ್ರತಿನಿಧಿಗಳ ಬಳಿ ಬಗೆಹರಿಸಿಕೊಳ್ಳಿ ಎಂದರು.
ಸರ್ಕಾರಿ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗುತ್ತಿರುವ ಶಾಲಾ ಮುಖ್ಯ ಶಿಕ್ಷಕಿ ವಿಜಯಮ್ಮರವರನ್ನು ಗಣ್ಯರು ಸನ್ಮಾನಿಸಿದರು.
ಬಿ.ಆರ್.ಸಿ. ಶ್ರೀರಂಗರಾಜು, ಬಿ.ಇ.ಓ.ಹನುಮಾನಾಯಕ್, ಪುರಸಭಾ ಸದಸ್ಯ ಹೆಚ್.ಜಿ.ರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ವಿ.ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಜಿ. ಭೀಮರಾಜು, ಬಿ.ಜೆ.ಪಿ ಮುಖಂಡರಾದ ರಾಜಮ್ಮ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಶಿವಕುಮಾರ್,  ಶಿಕ್ಷಕಿ ವಿಜಯಕುಮಾರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments