ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ಸ್ವಸ್ಥ ಸಮಾಜಕ್ಕೆ ಎಲ್ಲರ ಪಾತ್ರವೂ ಮುಖ್ಯ'

Mainashree
Updated On : 5 Feb 2013, 12:04 pm

ದೇವನಹಳ್ಳಿ: ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ಪೋಷಕರ ಪಾತ್ರ ಪ್ರಮುಖವಾಗಿದೆ ಎಂದು ದೇವನಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸಿ.ಕನಕಕುಮಾರ್ ಕಿವಿಮಾತು ಹೇಳಿದ್ದಾರೆ.  ಕನ್ನಮಂಗಲ ಎಂವಿಎಂ ಶಾಲೆಯ ಚಿಣ್ಣರ ಹಬ್ಬ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.   ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಶ್ರೀನಿವಾಸ್ ಮಾತನಾಡಿ, ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಪೋಷಕರಿಗೆ ಬರಬೇಕು ಮತ್ತು ಇಂದಿನ ಆಧುನಿಕತೆ ದಿನಗಳಲ್ಲಿ ತಂದೆ ತಾಯಿಗಳಿಗೆ ತಮ್ಮ ಮಕ್ಕಳನ್ನು ಸಾಕುವ ಬಗ್ಗೆ ತರಬೇತಿ ಅಗತ್ಯವಾಗಿದೆ ಎಂದರು.
ಶಾಸಕ ವೆಂಕಟಸ್ವಾಮಿ ಮಾತನಾಡಿ,  ಇಂದಿನ ದಿನಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆ ನಡೆಸುವುದು ಕಷ್ಟವಾಗಿದೆ.  ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಅಭಿನಂದನೀಯ ಎಂದರು.   ಇದೆ ಸಂದರ್ಭದಲ್ಲಿ ಇ.ಎಂ.ರಾಜು ದಂಪತಿಯನ್ನು ಸನ್ಮಾನಿಸಲಾಯಿತು.  ಕೆ.ಸಿ.ಲೋಕೇಶ್, ವಿನುತ ಸತೀಶ್, ಪಟಾಲಪ್ಪ, ರಾಧಾ ಶ್ರೀನಿವಾಸ್ ಮತ್ತಿರರರು ಉಪಸ್ಥತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement