ಲೋಕಾಯುಕ್ತ ಡಿವೈಎಸ್ಪಿಯಿಂದ ದೂರು ಸ್ವೀಕಾರ
ರಾಮನಗರ: ಜಿಲ್ಲೆಯ ಲೋಕಾಯುಕ್ತ ಡಿವೈಎಸ್ಪಿ ಅವರು ಫೆ.7ರಂದು ಚನ್ನಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು. ತಾಲೂಕಿನ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಹಣ ಕೇಳಿದ್ದಲ್ಲಿ ಅಥವಾ ಉದ್ದೇಶಪೂರ್ವಕ ವಿಳಂಬ ಮಾಡಿದ್ದಲ್ಲಿ ಅಂತಹ ದೂರುಗಳನ್ನು ಖುದ್ದಾಗಿ ಸಲ್ಲಿಸಬಹುದು.