ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ: ರಾಜೀವ್

Rashmi Kasaragodu
Updated On : 6 Feb 2013, 12:10 pm




ದೇವನಹಳ್ಳಿ: ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ಬಹುಮತ ಗಳಿಸಲಿದೆ ಎಂದು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ರಾಜೀವ್  ಸಾತವ್ ತಿಳಿಸಿದರು.
ಈ ಬಾರಿಯ ವಿಧಾನಸಭಾ ಚುನಾವಣೆಗೆ ನೂರಕ್ಕೂ ಹೆಚ್ಚು ಮಂದಿ ಯುವಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ರಾಜೀವ್ ತಿಳಿಸಿದರು.
ಅವರು ತುಮಕೂರಿನಲ್ಲಿ ನಡೆಯುವ ರಾಜೀವ್‌ಗಾಂಧಿಯವರ ಕನಸಿನ ಕೂಸಾದ ಫಲಾನುಭವಿಗಳಿಗೆ ಸರ್ಕಾರದಿಂದ ಹಣ ನೇರ ವರ್ಗಾವಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಮಾರ್ಗ ಮಧ್ಯ ದೇವನಹಳ್ಳಿ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು.
 ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಈ ಸರ್ಕಾರದ ವೈಫಲ್ಯಗಳನ್ನು ಕಳೆದ ಒಂದು ವರ್ಷದಿಂದ ಬಯಲಿಗೆ ಎಳೆದಿದ್ದೇವೆ ಎಂದು ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅವರು ತಿಳಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸವಲತ್ತುಗಳು ಜನ ಸಾಮಾನ್ಯರಿಗೆ ತಿಳಿಸಲು ಕಾಂಗ್ರೆಸ್ ಕಾರ್ಯಕರ್ತರು ಅರಿವು ಮೂಡಿಸಲಿದ್ದಾರೆ. ಕಾಂಗ್ರೆಸ್ ಮಾತ್ರ ಸುಭದ್ರ ಸರ್ಕಾರ ನೀಡಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಬಚ್ಚೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್, ದೇವನಹಳ್ಳಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಮುಖಂಡರಾದ ಚಂದ್ರಶೇಖರ್  ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement