ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

Mainashree
Updated On : 8 Feb 2013, 12:38 pm

ದೊಡ್ಡಬಳ್ಳಾಪುರ:  ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ತಾಲೂಕು ಜಾಲ ಹೋಬಳಿ ಬಂಡಿಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್.ವಿ. ವೆಂಕಟರಂಗನ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿ ಅಶ್ವಿನಿ ನೇತೃತ್ವದಲ್ಲಿ ದೊಡ್ಡಬಳ್ಳಾಪುರದ ಸುಭಾಷ್‌ನಗರ ಹಾಗೂ ತಾಲೂಕಿನ ತೂಬಗೆರೆ, ಸೊಣ್ಣೇನಹಳ್ಳಿಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಯಿತು. ಬಂಡಿಕೊಡಿಗೇಹಳ್ಳಿ ಗ್ರಾಪಂ ಕಾರ್ಯಾಲಯದ ಮೇಲೆ ಸಹ ದಾಳಿ ನಡೆದಿದೆ.
3 ವರ್ಷಗಳಿಂದ ಅವರು ಬಂಡಿಕೊಡಿಗೇಹಳ್ಳಿ ಗ್ರಾಪಂ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಅಕ್ರಮವಾಗಿ ಹಣಗಳಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಬೆಳಗ್ಗೆ ದಾಳಿ ನಡೆದ ಸಂದರ್ಭದಲ್ಲಿ ಸೊಣ್ಣೇನಹಳ್ಳಿ ಮತ್ತು ದೊಡ್ಡಬಳ್ಳಾಪುರದ ಮನೆಯಲ್ಲಿ ಹಲವು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಕೆಲ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement