ಅರ್ಹರಿಗೆ ಸೌಲಭ್ಯ ಕಲ್ಪಿಸುವುದೇ ಗುರಿ: ಶಾಸಕ ಬಾಲಕೃಷ್ಣ
ಮಾಗಡಿ: ತಾಲೂಕಿನ ಪ್ರತಿಯೊಬ್ಬರಿಗೂ ಆರೋಗ್ಯ, ಆಶ್ರಯ, ಅನ್ನ, ಕುಡಿಯುವ ನೀರು ಬಹಳ ಮುಖ್ಯ. ಅದನ್ನು ಪ್ರಾಮಾಣಿಕವಾಗಿ ಕಲ್ಪಿಸುವುದೇ ಗುರಿ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ನುಡಿದರು.
ತಾಲೂಕಿನ ಗವಿನಾಗಮಂಗಲದಲ್ಲಿ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಜನತೆ ಕಡ್ಡಾಯವಾಗಿ ಪಡಿತರ ಚೀಟಿ ಪಡೆಯಬೇಕು. ಗ್ರಾಪಂಗಳ ಪಿಡಿಒಗಳು ಎಲ್ಲಾ ಗ್ರಾಮಗಳ ಆಶ್ರಯ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಜವಾಬ್ದಾರಿಯಿಂದ ಎಚ್ಚರ ವಹಿಸಬೇಕು. ಸಮರ್ಪಕ ಕುಡಿಯುವ ನೀರು ಕಲ್ಪಿಸಲು ಹೆಚ್ಚಿನ ಆದ್ಯತೆ ಕೊಡಬೇಕು. ಮೂಲ ಸಮಸ್ಯೆಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಬೇಕು ಎಂದರು.
ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ನರಸಿಂಹಮೂರ್ತಿ ಮಾತನಾಡಿದರು.