ಕನಕಪುರ: ಇಲ್ಲಿನ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಕಚೇರಿ ಆವರಣದಲ್ಲಿ ಫೆ.20ರಂದು ಸಂಜೆ ವಿವೇಕ ವೇಷಭೂಷಣ ಸ್ಪರ್ಧೆ ಏರ್ಪಡಿಸಲಾಗಿದೆ.
ತಾಲೂಕು ವ್ಯಾಪ್ತಿಯ 1 ರಿಂದ 4ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು. ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಅಧ್ಯಕ್ಷ ನಾ.ಚಿ.ನಾಗರಾಜು ತಿಳಿಸಿದ್ದಾರೆ. ವಿವರಗಳಿಗಗೆ ಮೊ. 9801422999, 9902829267 ಸಂಪರ್ಕಿಸಿ.