ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬಯಪ ಅಧ್ಯಕ್ಷ, ಉಪಾಧ್ಯಕ್ಷರ ಕಡೆಗಣಿಸಿ ಕಾಮಗಾರಿ: ಆಕ್ರೋಶ

Mainashree
Updated On : 12 Feb 2013, 12:14 pm

ದೇವನಹಳ್ಳಿ: ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದಿಂದ ದೇವನಹಳ್ಳಿ ತಾಲೂಕಿನಲ್ಲಿ 12 ಕೋಟಿಗಳ 25ಕ್ಕೂ ಹೆಚ್ಚು ವಿವಿಧ ಕಾಮಗಾರಿಗಳಿಗೆ ಹಣ ಮಂಜೂರಾಗಿದೆ. ಶಾಸಕರು ಬಯಪ ಅಧ್ಯಕ್ಷರ ಮತ್ತು ಉಪಾಧ್ಯಕ್ಷರನ್ನು ಗಣನೆಗೆ ತೆಗೆದುಕೊಳ್ಳದೆ ಕೆಲವು ಕಾಮಗಾರಿಗಳಿಗೆ ಪೂಜೆ ಮಾಡಿ ಚಾಲನೆ ನೀಡಿರುವುದು ಸರಿಯಲ್ಲ ಎಂದು ಬಯಪ ನೂತನ ಉಪಾಧ್ಯಕ್ಷ ಕೆ.ನಾಗೇಶ್ ಸೋಮವಾರ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
 ದೇವನಹಳ್ಳಿ ತಾಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯದ ಬಿಜೆಪಿ ಸರ್ಕಾರ ಹಣ ಬಿಡುಗಡೆ ಮಾಡಿದ್ದರೂ ಶಾಸಕರು ತಾಲೂಕಿನ ಬಿಜೆಪಿ ಮುಖಂಡರನ್ನು ಕಡೆಗಣಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಮಂಜೂರಾದ ಕಾಮಗಾರಿಗಳಿಗೆ ಅವರ ಪಕ್ಷದ ಕಾರ್ಯಕರ್ತರನ್ನು ಸೇರಿಸಿಕೊಳ್ಳಲಿ. ಆದರೆ ರಾಜ್ಯ ಸರ್ಕಾರದ ಮತ್ತು ಬಯಪ ಯೋಜನಾ ಪ್ರಾಧಿಕಾರದಿಂದ ಮಂಜೂರಾದ ಎಲ್ಲ ಕಾಮಗಾರಿಗಳಿಗೆ ತಾಲೂಕು ಬಿಜೆಪಿ ಮುಖಂಡರ ಸಹಕಾರದೊಂದಿಗೆ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದರು.
ಫೆ.24ರೊಳಗಾಗಿ ಉಪಮುಖ್ಯಮಂತ್ರಿಗಳಾದ ಆರ್. ಅಶೋಕ್ ಅವರು ದೇವನಹಳ್ಲಿಗೆ ಆಗಮಿಸಲಿದ್ದು ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮುಖ್ಯವಾಗಿ ಹೈಟೆಕ್ ಬಸ್ ನಿಲ್ದಾಣಕ್ಕಾಗಿ ಹಣ ಮಂಜೂರಾತಿಯಾಗಲಿದೆ ಎಂದು ನಾಗೇಶ್ ತಿಳಿಸಿದರು.  
ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ವಿಷಯದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ರಾಜ್ಯದ ಬಿಜೆಪಿ ನಾಯಕರು ನೀಡುವ ಜವಾಬ್ದಾರಿ ಹುದ್ದೆಗೆ ಗೌರವ ಬರುವಂತೆ ಕೆಲಸ ಮಾಡುತ್ತೇನೆ. ಪಕ್ಷದ ನಾಯಕರು ಏನೇ ಹೇಳಲಿ ಅದರಂತೆ ನಡೆದುಕೊಳ್ಳುತ್ತೇನೆ ಎಂದರು.  ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ಬೂದಿಗೆರೆ ಪ್ರಭಾಕರ್, ಶಿವಪ್ರಸಾದ್, ಮುನೇಗೌಡ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement