ವಿಕಲಚೇತನರ ಪುನರ್ ವಸತಿಗಾಗಿ ಮೀಸಲಿರಿಸಿ (ಸುದ್ದಿ ಸಂಕ್ಷೇಪ)
ರಾಮನಗರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಸುತ್ತೋಲೆಗಳ ರೀತ್ಯ ನಗರಾಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಜಿ.ಪಂ.ನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳ ಅನುದಾನದಲ್ಲಿ ವಿಕಲಚೇತನರ ಪುನರ್ ವಸತಿಗಾಗಿ ಶೇಕಡಾ 3 ರಷ್ಟು ಮೀಸಲಿರಿಸಿ ಉಪಯೋಗಿಸಬೇಕು ಎಂದು ಸೂಚಿಸಲಾಗಿದೆ. ಈ ಅನುದಾನವನ್ನು ವಿಕಲಚೇತನರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ವೈದ್ಯಕೀಯ ಪುನರ್ ವಸತಿಗಾಗಿ ಉಪಯೋಗಿಸಬಹುದು. ಇಲಾಖೆಗಳು ವೆಚ್ಚ ಮಾಡಿದ ವಿವರವನ್ನು ಕಡ್ಡಾಯವಾಗಿ ಪ್ರತಿ ತಿಂಗಳ ಮೊದಲ ವಾರದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕ:ಕೇರಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆ, ನೆಲಮಹಡಿ, ಕಂದಾಯಭವನ, ಬಿ.ಎಂ.ರಸ್ತೆ, ರಾಮನಗರ-562159 ಇವರಿಗೆ ಒದಗಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂಣ080-2723024 ಸಂಪರ್ಕಿಸಬಹುದು.
18 ತಿಂಗಳ ತರಬೇತಿ
ರಾಮನಗರ: ಕೆನರಾ ಬ್ಯಾಂಕ್ ಪ್ರಾಯೋಜಿತ ಕೆಪಿಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯು ನಿರುದ್ಯೋಗಿ ಯುವಕರಿಗಾಗಿ ಮರ ಮತ್ತು ಕಲ್ಲು ಕೆತ್ತನೆ, ಲೋಹ ಶಿಲ್ಪ ವಿಭಾಗದಲ್ಲಿ 18 ತಿಂಗಳ ತರಬೇತಿ ಮತ್ತು ಕುಂಭ ಕಲೆ (ಟೆರ್ರಾಕೋಟಾ) ವಿಭಾಗದಲ್ಲಿ 6 ತಿಂಗಳ ಉಚಿತ ತರಬೇತಿಗಾಗಿ ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ, ಇನ್ನಿತರೆ ಸೌಲಭ್ಯಗಳನ್ನು ನೀಡಲಾಗುವುದು. ಆರ್ಥಿಕವಾಗಿ ಹಿಂದುಳಿದ ಮತ್ತು ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು. ನೇರ ಸಂದರ್ಶನವು ಫೆ.20ರಿಂದ 26 ರವರೆಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಪ್ರಾಯೋಜಿತ ಕೆ.ಪಿ.ಜೆ. ಪ್ರಭು ಕರಕುಶಲ ತರಬೇತಿ ಸಂಸ್ಥೆ, ಜೋಗರದೊಡ್ಡಿ, ಬಿಡದಿ ಕೈಗಾರಿಕಾ ಪ್ರದೇಶ, ಬಿಡದಿ ಇಲ್ಲಿ ನಡೆಯಲಿದೆ. ಅರ್ಜಿಯನ್ನು ಸಂದರ್ಶನದ ದಿನ ಅಥವಾ ಮುಂಗಡವಾಗಿ ಪಡೆದು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ. 9900158885 ಸಂಪರ್ಕಿಸಬಹುದು.
ಜೈನ್ ಸಮುದಾಯದ ವಿದ್ಯಾರ್ಥಿಗಳಿಗೆ ವೇತನ
ರಾಮನಗರ: ಅಲ್ಪಸಂಖ್ಯಾತರ ಇಲಾಖೆಯಿಂದ ಜೈನ್ ಸಮುದಾಯದ ಮೆಟ್ರಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಯೋಜನೆಯನ್ನು 2012-13ನೇ ಸಾಲಿನಲ್ಲಿ ಹಮ್ಮಿಕೊಳ್ಳಲಾಗಿದೆ. ಜೈನ್ ಸಮುದಾಯದ ವಿದ್ಯಾರ್ಥಿಗಳ ಮಾತ್ರ ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿದ್ದು, ಅರ್ಹ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ನಿಂದ ಪಡೆದು ಭರ್ತಿ ಮಾಡುವುದು. ಅರ್ಜಿಯ ಜೊತೆಗೆ ವಾರ್ಷಿಕ ವರಮಾನ ಪತ್ರ, ಅಂಕಪಟ್ಟಿಗಳು, 2012-13ನೇ ಸಾಲಿನಲ್ಲಿ ಸಂಬಂಧಪಟ್ಟ ಶಾಲೆಗೆ ಪಾವತಿಸಿರುವ ಶುಲ್ಕ, ರಶೀದಿಯ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರು ಸಲ್ಲಿಸಬೇಕು. ಸದರಿ ಅರ್ಜಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯರು ಪಟ್ಟಿ ತಯಾರಿಸಿ ಜಿಲ್ಲಾ ಅಧಿಕಾರಿಗಳು, ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಫೆ.23ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ವೆಬ್ಸೈಟ್ ನೋಡಬಹುದು ಎಂದು ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಪಿಯು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಮೈಸೂರು: ಪಿಯುಸಿ ವಿದ್ಯಾರ್ಥಿನಿಯೊಬ್ಬರು ಹಾಸ್ಟೆನ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಎಚ್.ಡಿ. ಕೋಟೆ ತಾಲೂಕು ಬೋಜೇಗೌಡನಹುಂಡಿ ನಿವಾಸಿ ಪವಿತ್ರಾ (18) ಆತ್ಮಹತ್ಯೆ ಮಾಡಿಕೊಂಡವರು. ಇವರು ಸಂತ ಫಿಲೋಮಿನಾ ಪಿಯು ಕಾಲೇಜಿನಲ್ಲಿ ಓದುತ್ತಿದ್ದು, ಸುಭಾಷ್ನಗರದಲ್ಲಿರುವ ಹಾಸ್ಟೆಲ್ವೊಂದರಲ್ಲಿ ಉಳಿದುಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.