ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ಭವಿಷ್ಯ ರೂಪಿಸಿಕೊಳ್ಳಲಿ

Rashmi Kasaragodu
Updated On : 13 Feb 2013, 12:19 pm


ಮಾಗಡಿ: ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ಭವಿಷ್ಯ ರೂಪಿಸಿಕೊಳ್ಳುವಂತೆ ಆದಿಚುಂಚನಗಿರಿ ಬೆಂಗಳೂರು ವಿಜಯನಗರ ಶಾಖಾ ಮಠದ ಸೌಮ್ಯನಾಥಸ್ವಾಮೀಜಿ  ಕರೆ ನೀಡಿದರು.
 ಅವರು ಮಾಗಡಿ ಪಟ್ಟಣದಲ್ಲಿರುವ ಶ್ರೀರಂಗನಾಥಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಗುರುಗಳು ಅನುಭವದ ಜ್ಞಾನವನ್ನು ಧಾರೆ ಎರೆಯುತ್ತಾರೆ ಎಂದರು.  ನಿವೃತ್ತ ಮುಖ್ಯಶಿಕ್ಷಕಿ ಬಿಸಜಾಕ್ಷಮ್ಮ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಬಿ.ಎಸ್.ನಂದಿನಿ ಶಾಲಾ ವಾರ್ಷಿಕ ವರದಿ ಮಂಡಿಸಿದರು. ಇದೇ ವೇಳೆ ಹೆಚ್ಚು ಅಂಕಗಳಿಸಿದ ಹಾಗೂ ಸಾಂಸ್ಕೃತಿಕ , ಕ್ರೀಡೆ, ಇತರೆ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.   ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿ ಶಿವೇಗೌಡ,  ದಿ.ಬಾಲಗಂಗಾಧರನಾಥಸ್ವಾಮೀಜಿಗಳು ಶಿಕ್ಷಣ ಕ್ರಾಂತಿ ಮಾಡಿದ್ದಾರೆ. ಅವರ ಸಾಧನೆಯನ್ನು ವಿದ್ಯಾರ್ಥಿಗಳು ಸಾರ್ಥಕತೆಗೊಳಿಸಿಕೊಳ್ಳಬೇಕು ಎಂದರು.     ಅಕ್ಷರದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ ಮಾತನಾಡಿದರು.     ಬಿಜಿಎಸ್ ಕಾಲೇಜು ಪ್ರಾಂಶುಪಾಲ ಕೆ. ಉಮೇಶ್, ಮುಖ್ಯಶಿಕ್ಷಕ ಸಿ.ರಂಗಪ್ಪ, ವೈ.ಎಲ್.ರಾಮಣ್ಣ, ಎಚ್.ಎಸ್. ವೆಂಕಟೇಶ್ ಮೂರ್ತಿ, ಜಯಸಿಂಹ,  ಬಗಿನಗೆರೆ ಶಾಲೆಯ ಮುಖ್ಯಶಿಕ್ಷಕ ಎನ್.ಲಕ್ಷ್ಮಯ್ಯ, ಸತೀಶ್ ಇತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement