ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ
ರಾಮನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ ಮಂಡಳಿಗಳನ್ನು ಅಕ್ಟೋಬರ್ 2013 ರಿಂದ 2016 ರವರೆಗೆ 3 ವರ್ಷಗಳ ಕಾಲಾವಧಿಗೆ ರಚಿಸಬೇಕಿದೆ. ಈ ಮಂಡಳಿಗಳ ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಂದಾಯ ಭವನ, 2ನೇ ಮಹಡಿ ರಾಮನಗರ ಜಿಲ್ಲೆ ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ
ರಾಮನಗರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ಮಾದರಿ ವಸತಿ ಶಾಲೆ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡಲಾಗುವುದು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರು.1 ಲಕ್ಷ, ಪರಿಶಿಷ್ಟ ವರ್ಗದವರಿಗೆ ರು.1.45 ಲಕ್ಷ ಹಾಗೂ ಹಿಂದುಳಿದ ವರ್ಗಗಳಿಗೆ ರು.45,500 ಆದಾಯ ಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ಮತ್ತು ಅಟಲಲ್ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಶೇಕಡಾ 50ರಷ್ಟು ಸೀಟುಗಳು ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ಶೇಕಡಾ 100ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತವೆ. ವಾಜಪೇಯಿ ಶಾಲೆಗಳಲ್ಲಿ 80 ವಿದ್ಯಾರ್ಥಿಗಳಿಗೆ, ಇತರೆ ವಸತಿ ಶಾಲೆಗಳಲ್ಲಿ 50 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರುತ್ತದೆ. ರಾಜ್ಯದ ಯಾವುದೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ, ಈಗಾಗಲೇ ವ್ಯಾಸಂಗ ಮಾಡಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾ.24ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಮೀಸಲಾತಿಯನ್ವಯ ಕೌನ್ಸೆಲಿಂಗ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.