ಬೆಂಡಿಗಾನಹಳ್ಳಿಯಲ್ಲಿ ಎನ್ಎಸ್ಎಸ್ ಶಿಬಿರ
ಸೂಲಿಬೆಲೆ: ಇಲ್ಲಿಗೆ ಸಮೀಪದ ಬೆಂಡಿಗಾನಹಳ್ಳಿ ಗ್ರಾಮದಲ್ಲಿ 14ರಂದು ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಉದ್ಘಾಟನೆ ಮಾಡಲಿದ್ದಾರೆ.
ಸೂಲಿಬೆಲೆ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಫೆ.14 ರಿಂದ ಫೆ.20 ರವರಿಗೂ ಶಿಬಿರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರು ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿ ಡಾ.ಸುಂದರ್ರಾಜ್ ಅರಸು, ಶಿಬಿರದ ನಿರ್ದೇಶಕಿ ಪ್ರೊ. ಸೀಮಾ, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ ಸತೀಶ್ಗೌಡ, ಸೂ.ರಂ. ರಾಮಯ್ಯ, ಬಿ.ಎನ್. ಗೋಪಾಲಗೌಡ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.