ಬೆಂಗಳೂರು ಗ್ರಾಮಾಂತರ

ಟ್ಯಾಂಕರ್ ಮೂಲಕ ನೀರು ಪೂರೈಕೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಶಾಸಕ ಜೆ.ನರಸಿಂಹಸ್ವಾಮಿ ಇಡೀ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಜನಸ್ನೇಹಿ ಕಾಳಜಿ ಮೆರೆದು ಅಚ್ಚರಿಗೆ ಕಾರಣರಾಗಿದ್ದಾರೆ. ಗುರುವಾರ ಬೆಳಗ್ಗೆ ಅವರು ಇಲ್ಲಿನ ದೇವಾಂಗಪೇಟೆಯಲ್ಲಿ ನಗರಸಭೆ, ಜಲ ಮಂಡಲಿ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮಂಡಲಿ ಸಹಯೋಗದಲ್ಲಿ ನಿರ್ಮಿಸಿರುವ ಬೃಹತ್ ಓವರ್‌ಹೆಡ್ ಟ್ಯಾಂಕ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರದಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸಮರೋಪಾದಿಯಲ್ಲಿ ಕಾರ್ಯೋನ್ಮುಖರಾಗಬೇಕಿದೆ. ಹಲವು ವಾರ್ಡ್‌ಗಳಲ್ಲಿ 10 ದಿನಕ್ಕೊಮ್ಮೆ ನೀರು ಬಿಡಲೂ ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜಲಮೂಲಗಳಲ್ಲಿ ನೀರಿನ ಲಭ್ಯತೆ ಇಲ್ಲದಿರುವುದೇ ಇದಕ್ಕೆ ಮೂಲ ಕಾರಣ. ಇದರಿಂದಾಗಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ನೀರಿನ ಬವಣೆಯನ್ನು ಪರಿಹರಿಸಲು ನಗರಸಭೆ ಕೂಡಲೇ ಕಾರ್ಯಪ್ರವೃತ್ತವಾಗಬೇಕು ಎಂದರು.
ಉದ್ಘಾಟನೆ: ನಗರಸಭೆ ವ್ಯಾಪ್ತಿಯ 31 ವಾರ್ಡ್‌ಗಳಿಗೆ ಪ್ರತಿ ವಾರ್ಡಿಗೊಂದರಂತೆ ಉಚಿತ ನೀರು ಪೂರೈಕೆ ಟ್ಯಾಂಕರ್‌ಗಳನ್ನು ನಿಯೋಜಿಸಬೇಕು. ಈ ಬಗ್ಗೆ ನಗರಸಭೆ ಆಯುಕ್ತರಿಗೆ ಸ್ಪಷ್ಟ ಆದೇಶ ನೀಡಿದ್ದೇನೆ. ಜಿಲ್ಲಾಧಿಕಾರಿಗಳಿಂದ ಟ್ಯಾಂಕರ್ ಖರೀದಿಗೆ ಸಹಕಾರ ನೀಡುವಂತೆ ಪ್ರಸ್ತಾಪಿಸುವುದಾಗಿದೆ ಹೇಳಿದ ಅವರು, ಪ್ರಸ್ತುತ ನೀರಿನ ಸಮಸ್ಯೆ ತೀರಾ ಬಿಗಡಾಯಿಸಿದ್ದು, ಜನ ಲಭ್ಯ ನೀರನ್ನು ಮಿತವಾಗಿ ಬಳಕೆ ಮಾಡಿಕೊಳ್ಳುವತ್ತ ಆಸಕ್ತಿ ವಹಿಸಬೇಕು. ಈ ಹಂತದಲ್ಲಿ ಸುಮಾರು 5 ಲಕ್ಷ ಲೀಟರ್ ಸಾಮರ್ಥ್ಯದ ಈ ಓವರ್‌ಹೆಡ್ ಟ್ಯಾಂಕನ್ನು ಇಂದು ಉದ್ಘಾಟಿಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ