ರಂಗನಾಥಸ್ವಾಮಿ ಅದ್ಧೂರಿ ಉತ್ಸವ
ರಾಮನಗರ: ತಾಲೂಕಿನ ಕೂನಗಲ್ ಗ್ರಾಮದಲ್ಲಿರುವ ಶ್ರೀ ರಂಗನಾಥಸ್ವಾಮಿ ರಥೋತ್ಸವವು ಭಾನುವಾರ ವಿಜೃಂಭಣೆಯಿಂದ ಜರುಗಿತು.ರಥಸಪ್ತಮಿಯಂದು ನಡೆದ ಈ ಮಹಾರಥೋತ್ಸವದಲ್ಲಿ ಅಕ್ಕಪಕ್ಕದ ಗ್ರಾಮಸ್ಥರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು. ಆಡಳಿತ ಮಂಡಳಿಯಿಂದ ಭಕ್ತರಿಗೆ ಮಜ್ಜಿಗೆ, ಪಾನಕ, ಪ್ರಸಾದಗಳನ್ನು ವಿತರಿಸಲಾಯಿತು. ವಿವಿಧ ಬಗೆಯ ಹೂವಿನಿಂದ ಅಲಂಕೃತಗೊಂಡಿದ್ದ ಸ್ವಾಮಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ರಥೋತ್ಸವದ ಅಂಗವಾಗಿ ರಾಜಸೂಯ ಯಾಗ ಎಂಬ ಪೌರಾಣಿಕ ನಾಟಕದ ಪ್ರದರ್ಶನ ನಡೆಯಿತು.