ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ ಪುರಸಭೆ ಚುನಾವಣೆ: ಯಾವುದೇ ನಾಮಪತ್ರ ಸಲ್ಲಿಕೆ ಇಲ್ಲ

Mainashree
Updated On : 19 Feb 2013, 10:30 am

ದೇವನಹಳ್ಳಿ: ದೇವನಹಳ್ಳಿ ಪುರಸಭೆಗೆ ಮಾ.7 ರಂದು ಚುನಾವಣೆ ನಡೆಯಲಿದ್ದು ಚುನಾವಣೆಗೆ  ನಾಮಪತ್ರಗಳನ್ನು ಸಲ್ಲಿಸಲು ಸೋಮವಾರ 23 ವಾರ್ಡ್‌ಗಳಿಂದ ಯಾವುದೇ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
 23 ವಾರ್ಡ್‌ಗಳನ್ನು ಮೂರು ವಿಭಾಗಗಳನ್ನಾಗಿ ಮಾಡಲಾಗಿದ್ದು 1 ರಂದೆ 8 ರವರೆಗೆ ಹಿರಿಯ ತೋಟಗಾರಿಕೆ ಅಧಿಕಾರಿಗಳ ಕಚೇರಿ, 9 ರಿಂದ 16 ರವರೆಗೆ ಹಿರಿಯ ಕೃಷಿ ಇಲಾಖೆ ಅಧಿಕಾರಿಗಳ ಕಚೇರಿ ಹಾಗೂ 17 ರಿಂದ 23 ರವರೆಗೆ ಪ್ರವಾಸಿ ಮಂದಿರ ಬಳಿ ಇರುವ ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದ ಕಚೇರಿಗಳಲ್ಲಿ ಪ್ರತ್ಯೇಕವಾಗಿ ನಾಮಪತ್ರಗಳ ಸ್ವೀಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
 ದೇವನಹಳ್ಳಿ ಪುರಸಭೆಗೆ ಸ್ಪರ್ಧಿಸಲಿರುವ ಆಕಾಂಕ್ಷಿಗಳ ಹಾಗೂ ಕಾರ್ಯಕರ್ತರ ಸಭೆಗಳನ್ನು ಈಗಾಗಲೇ ರಾಜಕೀಯ ಪಕ್ಷಗಳ ಮುಖಂಡರು ನಡೆಸಿದ್ದು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಎಲ್ಲ ವಾರ್ಡ್‌ಗಳಲ್ಲಿ ಮೂವರು ಅಭ್ಯರ್ಥಿಗಳು ಆಕಾಂಕ್ಷಿಗಳಿದ್ದಾರೆ ಎಂದು ಪಕ್ಷಗಳ ಮುಖಂಡರು ತಿಳಿಸಿದ್ದಾರೆ, ಬಿಜೆಪಿ ಎಲ್ಲ 23 ವಾರ್ಡ್‌ಗಳಲ್ಲೂ ಸ್ಪರ್ಧಿಸಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಎಸ್. ರಮೇಶ್ ತಿಳಿಸಿದ್ದಾರೆ.
ಜೆಡಿಎಸ್‌ನಿಂದ ಬಿ.ಫಾರಂ ಪಡೆದ ಎಲ್ಲ 23 ಮಂದಿ ಅಭ್ಯರ್ಥಿಗಳು ಫೆ.22 ರಂದು ಒಟ್ಟಿಗೆ ನಾಮ ಪತ್ರ  ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಮುನಿಶಾಮಯ್ಯ ತಿಳಿಸಿದ್ದಾರೆ.  ಕಾಂಗ್ರೆಸ್‌ನಿಂದ ಪುರಸಭೆಯ 13 ವಾರ್ಡ್‌ಗಳಲ್ಲಿ ಈಗಾಗಲೇ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗಿದ್ದು ಉಳಿದ 10 ವಾರ್ಡ್‌ಗಳಲ್ಲಿ ಪ್ರತಿ ವಾರ್ಡಿಗೆ  ನಾಲ್ಕೈದು ಮಂದಿ ಆಕಾಂಕ್ಷಿಗಳಿದ್ದು ಎರಡು ದಿನದೊಳಗಾಗಿ ಅಂತಿಮಗೊಳಿಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಜಗನ್ನಾಥ್ ತಿಳಿಸಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಗಳು ಒಟ್ಟಿಗೆ ಶುಕ್ರವಾರವೇ ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಫೆ.20 ರಂದು ಬಿಜೆಪಿ ಅಭ್ಯರ್ಥಿಗಳು  ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.     

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement