ಹೈಕೋರ್ಟ್ನಿಂದ ತಡೆಯಾಜ್ಞೆ
ರಾಮನಗರ: ಜಿ.ಪಂ. ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಹೈಕೋರ್ಟ್ನಿಂದ ತಡೆಯಾಜ್ಞೆ ತರಲಾಗಿದೆ ಎಂದು ಜಿ.ಪಂ. ಪ್ರತಿಪಕ್ಷ ನಾಯಕ ಇಕ್ಬಾಲ್ ಹುಸೇನ್ ಹೇಳಿದರು. ಫೆ.2ರಂದು ನಡೆಸಿದ್ದ ಸಭೆ ಸಂಬಂಧ ಸದಸ್ಯರಿಗೆ ಕಳುಹಿಸಿದ್ದ ನೊಟೀಸ್ನಲ್ಲಿ ದಿನಾಂಕ ತಪ್ಪಾಗಿ ನಮೂದಿಸಿ ಗೊಂದಲ ಮೂಡಿಸಿದ್ದರಿಂದ ಆಯ್ಕೆ ಪ್ರಕ್ರಿಯೆ ವಿರುದ್ಧ ಕಾಂಗ್ರೆಸ್ ಕಾನೂನು ಹೋರಾಟ ನಡೆಸಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮತ್ತೆ ಸಭೆ ಕರೆದು ಆಯ್ಕೆ ಪ್ರಕ್ರಿಯೆ ನಡೆಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ ಎಂದರು. ಗೋಷ್ಠಿಯಲ್ಲಿ ಜಿ.ಪಂ. ಮಾಜಿ ಉಪಾಧ್ಯಕ್ಷೆ ಮಾದೇವಿ, ಸದಸ್ಯರಾದ ಲಕ್ಷ್ಮಮ್ಮ, ರಂಗಸ್ವಾಮಿ, ವೆಂಕಟೇಶ್, ಸೌಭಾಗ್ಯ ಹಾಜರಿದ್ದರು.
5ನೇ ತರಗತಿ ಪಾಸಾಗಿರುವ ವಿದ್ಯಾರ್ಥಿಗಳಿಂದ ಅರ್ಜಿ
ರಾಮನಗರ: 2013-14ನೇ ಸಾಲಿನಲ್ಲಿ ಆದರ್ಶ ವಿದ್ಯಾಲಯಗಳಿಗೆ ದಾಖಲಾತಿಗೆ 5ನೇ ತರಗತಿ ಪಾಸಾಗಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಥವಾ ಆದರ್ಶ ವಿದ್ಯಾಲಯಗಳಲ್ಲಿ ಪಡೆಯಬಹುದು. ಫೆ.28 ಅರ್ಜಿ ಸಲ್ಲಿಸಲು ಕಡೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಸಂಪರ್ಕಿಸಬಹುದು.