ಎಲ್ಲಾ ವಾರ್ಡ್ಗಳಿಗೂ ಸ್ಪರ್ಧೆ: ಶಂಕರ್
ದೊಡ್ಡಬಳ್ಳಾಪುರ: ನಗರಸಭೆಗೆ ಮಾ.7ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಎಲ್ಲ 31 ವಾರ್ಡ್ಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆಗಳು ನಡೆದಿವೆ ಎಂದು ರಾಜ್ಯ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ಅಧ್ಯಕ್ಷ ಜಿಗಣಿ ಶಂಕರ್ ಹೇಳಿದರು.
ಈಗಾಗಲೇ ಪಕ್ಷದ ತಾಲೂಕು ಅಧ್ಯಕ್ಷ ಸಿ.ಕುಮಾರ್ ಅವರಿಗೆ ಬಿಫಾರಂ ನೀಡಲಾಗಿದ್ದು, ಪಕ್ಷನಿಷ್ಠೆ ಹೊಂದಿರುವ ಕಾರ್ಯಕರ್ತರನ್ನು ಕಣಕ್ಕಿಳಿಸಲು ಸೂಚಿಸಲಾಗಿದೆ ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಜಿ.ವಸಂತಕುಮಾರ್ ಮತ್ತಿತರರು ಹಾಜರಿದ್ದರು.
---