ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸರ್ಕಾರಿ ಕಾಲೇಜಿನಲ್ಲಿ ರಕ್ತದಾನ ಶಿಬಿರ

Srinivasa Murthy VN
Updated On : 26 Feb 2013, 11:32 am

ದೊಡ್ಡಬಳ್ಳಾಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ರಾಜ್ಯ ರೈತ ವಿದ್ಯಾರ್ಥಿ ಸೇನೆ ಮತ್ತು ಕಾವೇರಿ ಕೊಳಗೇರಿ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ರೈತ ಮುಖಂಡ, ಕನ್ನಡಪರ ಹೋರಾಟಗಾರ ಡಾ.ಎನ್.ವೆಂಕಟರೆಡ್ಡಿ ಅವರ ನೆನಪಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮಂಗಳವಾರ ಬೆಳಗ್ಗೆ ನಡೆಯಿತು.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಮುಖಂಡರಾದ ಪ್ರೊ.ಸುಲೋಚನಮ್ಮ ವೆಂಕಟರೆಡ್ಡಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಪಿ.ರಾಜಣ್ಣ ಮಾತನಾಡಿದರು.
 ಪತ್ರಕರ್ತ ಎನ್.ಎಂ. ನಟರಾಜ್, ರೈತ ವಿದ್ಯಾರ್ಥಿ ಸೇನೆಯ ವಸಂತಗೌಡ, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು, ಹಸಿರು ಸೇನೆ, ವಿದ್ಯಾರ್ಥಿ ಸೇನೆ ಸೇರಿದಂತೆ ಅನೇಕ ಸಂಘಟನೆಗಳ ಕಾರ್ಯಕರ್ತರು ಹಾಜರಿದ್ದರು. ಬೆಂಗಳೂರಿನ ರಾಜಾಜಿನಗರದ ಇಎಸ್‌ಐ ರಕ್ತನಿಧಿಯವರು ರಕ್ತ ಸಂಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement