ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಅಭಿವೃದ್ಧಿ ಯೋಜನೆಗಳಿಂದ ಜನಮನದಲ್ಲಿ ನೆಲೆಸಿದ ಚುಂಚನಶ್ರೀ: ಡಾ. ರಾಮೇಗೌಡ

Parashurama
Updated On : 24 Jan 2013, 12:23 pm

ಕನಕಪುರ: ಚುಂಚನಗಿರಿಶ್ರೀ ಧಾರ್ಮಿಕ, ವಿದ್ಯಾ, ಆರೋಗ್ಯ, ಪರಿಸರ ಸಂರಕ್ಷಣೆ, ವಿಕಲಚೇತನರ ಅಭ್ಯುಧಯ ಮೊದಲಾದ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಯೂರಿದೆ ಎಂದು ನಿವೃತ್ತಕುಲಪತಿ ಹಾಗೂ ಚುಂಚನಗಿರಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ಎನ್.ಎಸ್. ರಾಮೇಗೌಡ ಹೇಳಿದ್ದಾರೆ.
ತಾಲೂಕು ಹಾರೋಹಳ್ಳಿಯ ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ಮರಳವಾಡಿ, ಹಾರೋಹಳ್ಳಿ ಹೋಬಳಿ ಒಕ್ಕಲಿಗ ಸಮುದಾಯ ವತಿಯಿಂದ ಆಯೋಜಿಸಿದ್ದ ಭೂಶಾಂತಿ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವಿಶ್ವ ಒಕ್ಕಲಿಗರ ಸಂಸ್ಥಾನಮಠದ ಶ್ರೀಕುಮಾರ ಚಂದ್ರಶೇಖರನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ, ಚುಂಚನ ಶ್ರೀಗಳ ಒಡನಾಟ, ಗುಣ ಸ್ವಭಾವಗಳ ಗುಣಗಾನ ಮಾಡಿದರು.
ಸಭೆಯಲ್ಲಿ ಶ್ರೀಗಳ ಆತ್ಮಕ್ಕೆ ಶಾಂತಿ ಕೋರಿ 2 ನಿಮಿಷ ಮೌನ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 500 ಬಾಟಲಿಗಳಷ್ಟು ರಕ್ತ ಸಂಗ್ರಹಿಸಿ ಆಸ್ಪತ್ರೆಗೆ ನೀಡಲಾಯಿತು. ನೆರೆದಿದ್ದ ಸಾರ್ವಜನಿಕರಿಗೆ ಪರಿಸರ ಪ್ರೇಮಿ ಶ್ರೀಗಳ ನೆನಪಿಗಾಗಿ 4 ಸಾವಿರ ಸಸಿಗಳನ್ನು ವಿತರಿಸಲಾಯಿತು. ಎಲ್ಲರಿಗೂ ಶ್ರೀಗಳ ಭಾವಚಿತ್ರವಿರುವ ಕ್ಯಾಲೆಂಡರ್ ಉಚಿತವಾಗಿ ವಿತರಿಸಲಾಯಿತು. ಅನ್ನ ದಾಸೋಹ ನಡೆಯಿತು.
ಅತಿಥಿ ಭಾಷಣಕಾರರಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಪ್ರೊ. ತಿಮ್ಮೇಗೌಡ ಮಾತನಾಡಿದರು. ಭೂಶಾಂತಿ, ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಕೆ.ರಾಜು, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮರಿಲಿಂಗೇಗೌಡ, ಜಿಪಂ ಮಾಜಿ ಅಧ್ಯಕ್ಷ ಎಚ್.ಕೆ. ನಾಗರಾಜು, ಜಿಪಂ ಮಾಜಿ ಸದಸ್ಯ ಭುಜಂಗಯ್ಯ, ಜಿಪಂ ಸದಸ್ಯೆ ಗೀತಾ ಈಶ್ವರ್, ತಾಪಂ ಮಾಜಿ ಸದಸ್ಯ ರಾಂಪುರ ನಾಗೇಶ್, ಕಸಾಪ ಮಾಜಿ ಅಧ್ಯಕ್ಷ ಬಿ.ಟಿ. ಚಿಕ್ಕಪುಟ್ಟೇಗೌಡ, ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ನಾರಾಯಣಗೌಡ, ಲಿಂಗಪ್ಪ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಭುಜಂಗಯ್ಯ ಸ್ವಾಗತಿಸಿದರು. ಶಿವನಂಜಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆರ್.ವಿ.ನಾರಾಯಣ ನಿರೂಪಿಸಿದರು. ನಾಗೇಶ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments