ಸ್ವಾಮೀಜಿ ನಿಧನದಿಂದ ತುಂಬಲಾರದ ನಷ್ಟ
ರಾಮನಗರ: ತ್ರಿವಿಧ ದಾಸೋಹದ ಮೂಲಕ ಬಡವರ ಮತ್ತು ದೀನದಲಿತರ ಬಾಳಿನ ಬೆಳಕಾಗಿದ್ದ ಬಾಲಗಂಗಾಧರನಾಥ ಸ್ವಾಮೀಜಿ ಅವರ ನಿಧನದಿಂದಾಗಿ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ತಿಳಿಸಿದರು.
ಬಿಡದಿ ಬಳಿಯ ಬಾನಂದೂರಿನ ಬಿಜಿಎಸ್ ಶಾಲೆಯಲ್ಲಿ ನಡೆದ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಶ್ರೀಗಳು ಶ್ರಮಿಸಿದರು. ಲಕ್ಷಾಂತರ ಮಂದಿಯ ಬಾಳಿನ ಬೆಳಕಾಗಿದ್ದ ಅವರು ಜನಮಾನಸದಲ್ಲಿ ಉಳಿಯುವ ಕೆಲಸ ಮಾಡಿದ್ದಾರೆ ಎಂದು ಬಣ್ಣಿಸಿದರು.
ಆದಿ ಚುಂಚನಗಿರಿ ಕ್ಷೇತ್ರದ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮಿ, ಮುಖಂಡರಾದ ಮರಿಸ್ವಾಮಯ್ಯ, ಬಿ.ಟಿ.ರಘುಪತಿ, ಬಿ.ಎಂ.ರಾಜಶೇಖರ್, ಕೇಶವಮೂರ್ತಿ, ಹನುಮಂತೇಗೌಡ, ಮರಿಸ್ವಾಮಯ್ಯ ಮತ್ತಿತರರು ಭಾಗವಹಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.