ಎಸ್ಐ ವಿಜಯಕುಮಾರ್ ಅಂತ್ಯಕ್ರಿಯೆ
ನೆಲಮಂಗಲ: ಪೊಲೀಸ್ ಪೇದೆಯ ಗುಂಡಿಗೆ ಬಲಿಯಾಗಿದ್ದ ರಾಜಾನುಕುಂಟೆ ಎಸ್ಐ ವಿಜಯಕುಮಾರ್ ಅವರ ಅಂತ್ಯ ಸಂಸ್ಕಾರ ತಾಲೂಕಿನ ರೇಲ್ವೆಗೊಲ್ಲಹಳ್ಳಿ ಗ್ರಾಮದ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸೋಮವಾರ ಮಧ್ಯಾಹ್ನ ನೆರವೇರಿತು. ಅಂತ್ಯ ಸಂಸ್ಕಾರದ ವೇಳೆ ಮೃತರ ಪತ್ನಿ ಭಾಗ್ಯಲಕ್ಷ್ಮಿ, ಮಕ್ಕಳು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತು. ಅಂತ್ಯ ಸಂಸ್ಕಾರದಲ್ಲಿ ಪೊಲೀಸ್ ಇಲಾಖೆಯ ಎಡಿಜಿಪಿ ಬಿಪಿನ್ ಗೋಪಾಲಕೃಷ್ಣ, ಐಜಿ ಅಮರ್ಕುಮಾರ್ ಪಾಂಡೆ, ಬೆಂಗಳೂರು ಗ್ರಾಮಾಂತರ ಎಸ್ಪಿ ಡಾ.ಪ್ರಕಾಶ್ ಇತರರು ಅಂತಿಮ ನಮನ ಸಲ್ಲಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.