ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರಾಮನಗರ: ಬಾಲಗಂಗಾಧರನಾಥ ಸ್ವಾಮಿಯವರ ಪುಣ್ಯಾರಾಧನೆ

Rashmi Kasaragodu
Updated On : 29 Jan 2013, 11:19 am





ರಾಮನಗರ: ಶ್ರೀ ಬಾಲಗಂಗಾಧರನಾಥ ಸ್ವಾಮಿಯವರ ಪುಣ್ಯಾರಾಧನಾ ಕಾರ್ಯಕ್ರಮವು ನಗರದ ಹಳೇ ಬಸ್ ನಿಲ್ದಾಣದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿತು.  ಸ್ವಾಮೀಜಿಯವರ ಭಕ್ತವೃಂದವು ಏರ್ಪಡಿಸಿದ್ದ ಪುಣ್ಯಾರಾಧನಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅಗಲಿದ ಶ್ರೀಗಳಿಗೆ ನಮನ ಸಲ್ಲಿಸಿದರು.  ಬೆಳಗ್ಗೆ 11ಕ್ಕೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಎಲ್ಲ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ಜಾನಪದ ಲೋಕದ ಬಳಿ ಇರುವ ಬಿಜಿಎಸ್ ಅಂಧರ ಶಾಲೆಯ ಮಕ್ಕಳು ಸ್ವಾಮೀಜಿ ಮತ್ತು ಆದಿ ಚುಂಚನಗಿರಿ ಕ್ಷೇತ್ರದ ಬಗೆಗಿನ ಭಕ್ತಿ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದವರಲ್ಲಿ ಭಕ್ತಿಯ ಸಿಂಚನ ಮಾಡಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement