ಸೂಲಿಬೆಲೆ ಸುತ್ತಮುತ್ತ 64ನೇ ಗಣರಾಜ್ಯೋತ್ಸವ ಆಚರಣೆ
ಸೂಲಿಬೆಲೆ: ಹೋಬಳಿಯ ನಾನಾ ಕಡೆ 64ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಲ್ಲಿಗೆ ಸಮೀಪದ ಗಿಡ್ಡಪ್ಪನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸಿಆರ್ಪಿ ಮುತ್ತುರಾಜ್ ಧ್ವಜಾರೋಹಣ ಮಾಡಿ ಗಣತಂತ್ರ ವ್ಯವಸ್ಥೆ ಬಗ್ಗೆ ಮಾತನಾಡಿದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆದವು. ಇದೇ ಗ್ರಾಮದ ಉರ್ದು ಶಾಲೆಯಲ್ಲಿ ಹಿರಿಯ ಮುಖಂಡ ಅಕ್ಬರ್ ಆಲಿಖಾನ್ ಚಾಲನೆ ನೀಡಿದರು. ಮಾಜಿ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಅರಸನಹಳ್ಳಿ ಗ್ರಾಮದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಧ್ವಜಾರೋಹಣ ಮಾಡಿದರು. ಮುಖಂಡರಾದ ಅಣ್ಣೇಯ್ಯಪ್ಪ, ಭಾಗ್ಯಮ್ಮ, ಪ್ರೇಮಕುಮಾರ್ ಉಪಸ್ಥಿತರಿದ್ದರು. ಸೂಲಿಬೆಲೆಯ ಜನತಾ ಕಾಲೊನಿಯ ಸರ್ಕಾರಿ ಹಿರಿಯ ಶಾಲೆಯಲ್ಲಿ ಗ್ರಾಪಂ ಅಧ್ಯಕ್ಷ ನಾರಾಯಣಪ್ಪ ಸಮಾರಂಭವನ್ನು ಉದ್ಘಾಟಿಸಿದರು.ಮಾಜಿ ಅಧ್ಯಕ್ಷ ಜನಾರ್ದನ್ ರೆಡ್ಡಿ, ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಹಲವರು ಹಾಜರಿದ್ದರು. ಟೌನ್ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ನಾರಾಯಣಪ್ಪ ಧ್ವಜಾರೋಹಣ ಮಾಡಿದರು. ಗಣತಂತ್ರದ ಬಗ್ಗೆ ಶಿಕ್ಷಣ ತಜ್ಞ ಸುಬ್ರಾಯ್ ಸೇಠ್ ಮಾತನಾಡಿದರು. ವಿದ್ಯಾರ್ಥಿಗಳಿಂದ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿಜೇತರಿಗೆ ಉಮೇಶ್, ಜನಾರ್ದನ್ ರೆಡ್ಡಿ, ರಮೇಶ್ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಿದರು.