ಕನಕಪುರ: ಕರ್ನಾಟಕ ರಾಜ್ಯ ಹಾಗೂ ರಾಮನಗರ ಜಿಲ್ಲಾ ಕುಂಬಾರರ ಮಹಾಸಭಾ ವತಿಯಿಂದತ ರಾಮನಗರ ಜಿಲ್ಲಾ ಕುಂಬಾರ ಜನಾಂಗದ ಜಾಗೃತಿ ಸಮಾವೇಶ ಜ.31 ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಕನಕಪುರದ ನಾಡೋಜ ಡಾ.ರಾಜ್ ಬಯಲು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಸಮಾರಂಭದ ನೇತೃತ್ವವನ್ನು ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ವಹಿಸಲಿದ್ದು, ದೇಗುಲಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಾನ್ನಿಧ್ಯವನ್ನು ಮರಳೇ ಗವಿ ಮಠದ ಶ್ರೀ ಮುಮ್ಮಡಿ ಶಿವರುದ್ರ ಸ್ವಾಮೀಜಿ, ಶ್ರೀ ಮುಮ್ಮಡಿ ಮಹಾಲಿಂಗ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಬಸವಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಗಿರಿಕ್ಷೇತ್ರದ ಶ್ರೀ ಅನ್ನದಾನೇಶ್ವರ ಸ್ವಾಮೀಜಿ ವಹಿಸಲಿದ್ದಾರೆ.
ಸಂಸದ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಉದ್ಘಾಟನೆಯನ್ನು ನೆರವೇರಿಸಲಿದ್ದು, ಶಾಸಕ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಹಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ರೇಣುಕಾಚಾರ್ಯ, ವಸತಿ ಸಚಿವ ವಿ. ಸೋಮಣ್ಣ, ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಪಾಲ್ಗೊಳ್ಳಲಿದ್ದಾರೆ. ಕುಂಬಾರ ಸಮುದಾಯದ ಬಂಧುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ರಾಜ್ಯಾಧ್ಯಕ್ಷ ಶಿವಕುಮಾರಚೌಡಶೆಟ್ಟಿ ಕೋರಿದ್ದಾರೆ.