ಹುಚ್ಚು ನಾಯಿ ದಾಳಿ: ಮಗುವಿಗೆ ತೀವ್ರ ಗಾಯ
ಚನ್ನಪಟ್ಟಣ: ರಸ್ತೆಯಲ್ಲಿ ಆಟವಾಡುತ್ತಿದ್ದ 3 ವರ್ಷದ ಕಂದಮ್ಮನ ಮೇಲೆ ಹುಚ್ಚು ನಾಯಿ ದಾಳಿ ಮಾಡಿ ತೀವ್ರ ಗಾಯ ಗೊಳಿಸಿರುವ ಘಟನೆ ತಾಲೂಕಿನ ಮೋಳೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಸುರೇಶ್ ಎಂಬುವರ ಮಗ ನಿಕಿಲ್ (3) ಹುಚ್ಚುನಾಯಿ ದಾಳಿಗೆ ತುತ್ತಾಗಿರುವ ಕಂದಮ್ಮ. ಮನೆಯ ಮುಂದಿನ ರಸ್ತೆಯಲ್ಲಿ ಆಟವಾಡುತ್ತಿದ್ದಾಗ ದಾಳಿ ಮಾಡಿದ ಹುಚ್ಚುನಾಯಿ ಮುಖದ ಕೆಲವು ಭಾಗ ಸೇರಿದಂತೆ ಕೈ ಬೆನ್ನು ಹಲವೆಡೆ ಕಚ್ಚಿಗಾಯಗೊಳಿಸಿದೆ.
ದಾಳಿ ನಡೆಸಿದ ನಾಯಿ ಮಗುವನ್ನು ಕಚ್ಚಿಕೊಂಡು ಹೋಗುತ್ತಿರುವುದನ್ನ ಕಂಡ ಗ್ರಾಮಸ್ಥರು ನಾಯಿಯಿಂದ ಮಗುವನ್ನು ಪಾರು ಮಾಡಿದ್ದಾರೆ.
ನಾಯಿ ದಾಳಿಯಿಂದ ತೀವ್ರ ನಿತ್ರಾಣನಾದ ಬಾಲಕನನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಆಸ್ಪತ್ರೆಗೆ ಸೇರಿಸಲಾಗಿದೆ.
ಗ್ರಾಮಸ್ಥರ ಆಕ್ರೋಶ: ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು ಕುರಿ ಮೇಕೆ ಕೋಳಿ ಸೇರಿದಂತೆ ಸಾಕು ಪ್ರಾಣಿಗಳು ದಿನಕ್ಕೆ ಒಂದರಂತೆ ನಾಯಿಗಳ ಬಾಯಿಗೆ ತುತ್ತಾಗುತ್ತಿದ್ದು ಈ ಬಗ್ಗೆ ಹಲವಾರು ಬಾರಿ ಗ್ರಾ.ಪಂ.ಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.