ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ಸಣ್ಣ ಪತ್ರಿಕೆಗಳಿಗೂ ಆದ್ಯತೆ ನೀಡಿ'

Vishwanath S
Updated On : 2 Jul 2013, 1:13 am

ವಿಜಯಪುರ: ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನ ಹಾಗೂ ಅಡಕು ತೊಡುಕುಗಳನ್ನು ಮುಖ್ಯವಾಹಿನಿಗೆ ತರುವುದರಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸುತ್ತಲಿವೆ ಎಂದು ಮಾಜಿ ಶಾಸಕ ಹನುಮಂತರಾಯಪ್ಪ ತಿಳಿಸಿದರು.
ಅವರು ಪಟ್ಟಣ ಸಮೀಪದ ಹೊಲೇರಹಳ್ಳಿ ದೇವಾಲಯದ ಬಳಿ 4 ಮಾಸಿಕ ಪತ್ರಿಕೆಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸ್ಥಳೀಯ ಸಣ್ಣ ಪತ್ರಿಕೆಗಳು ಸ್ವತಹ ಸಮಾಜದಲ್ಲಿನ ನ್ಯೂನತೆಗಳನ್ನು ಪ್ರಕಟಿಸಿ ಸಂಬಂಧಪಟ್ಟ ಜನ ಪ್ರತಿನಿಧಿಗಳ ಮತ್ತು ಅಧಿಕಾರಿಗಳ ಗಮನಕ್ಕೆ ತರುತ್ತಿವೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಜನಸಮಾನ್ಯರು ಎಲೆಕ್ಟ್ರಾನಿಕ್ ಮೀಡಿಯಾಗೆ ಮಾರು ಹೋಗುತ್ತಿದ್ದು ಸಣ್ಣ ಪತ್ರಿಕೆಗಳ ಸಂಪಾದಕರ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಕ್ಷಿಣಿಸುತ್ತಿದೆ ಎಂದರು.
ರಾಜ್ಯ ಕಾರ್ಯನಿರತ ಪತ್ರಿಕಾ ಸಂಘದ ಉಪಾಧ್ಯಕ್ಷ ಮಂಡಿಬೆಲೆ ರಾಜಣ್ಣ ಮಾತನಾಡಿದರು. ಎಎಸ್‌ಐ ಮುನಿವೆಂಕಟಪ್ಪ, ಜಂಗಮ ಕೋಟೆಠಾಣೆಯ ಎ.ಎಸ್.ಐ ವೆಂಕಟರಮಣಪ್ಪ, ನಾಗರಾಜ್, ರಾಜ್‌ಗೋಪಾಲ್, ಮಂಜುನಾಥ್, ಚನ್ನರಾಯಪ್ಪ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement