'ಅರ್ಹರಿಗೆ ಸರ್ಕಾರಿ ಸವಲತ್ತು ಸಿಗಲಿ'
ದೊಡ್ಡಬಳ್ಳಾಪುರ: ಬಡವರಿಗೆ ಸರ್ಕಾರಿ ಸವಲತ್ತುಗಳನ್ನು ವ್ಯವಸ್ಥಿತವಾಗಿ ನೀಡುವಂತಾಗಬೇಕು. ನಿವೇಶನ ರಹಿತ ಬಡವರಿಗೆ ಕೂಡಲೇ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಜನಪರ ಹೋರಾಟಗಳ ಒಕ್ಕೂಟದ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, 2007ರಿಂದ ಈವರೆಗೆ ಆಗ್ರಹಿಸಿಕೊಂಡು ಬರುತ್ತಿದ್ದರೂ ಪ್ರತಿಭಟನೆ-ಹೋರಾಟಗಳಿಗೆ ಅಧಿಕಾರಿಗಳು ಬೆಲೆ ಕೊಟ್ಟಿಲ್ಲ. ತಾಲೂಕಿನಲ್ಲಿ ಬಡತನರೇಖೆಗಿಂತ ಕೆಳಗಿರುವ ಕುಟುಂಬಗಳ ಸಮೀಕ್ಷೆ ನಡೆದಿಲ್ಲ.
ಬಿಪಿಎಲ್ ಕುಟುಂಬಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಯಾವುದೇ ಸೌಲಭ್ಯಗಳೂ ಸಿಗುತ್ತಿಲ್ಲ. ಈ ಕೂಡಲೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು.
ತಪ್ಪಿದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.
ಜನಪರ ಹೋರಾಟಗಳ ಒಕ್ಕೂಟದ ರಾಜ್ಯ ಮತ್ತು ಜಿಲ್ಲಾ ಮುಖಂಡರು ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.