10ಕ್ಕೆ ಅನ್ನಭಾಗ್ಯ ಯೋಜನೆ ಉದ್ಘಾಟನೆ
ರಾಮನಗರ: ಜಿಲ್ಲೆಯ ಬಿಪಿಎಲ್ ಪಡಿತರ ಚೀಟಿದಾರರಿಗೆ ರು.1ಕ್ಕೆ 1ಕೆ.ಜಿ. ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆಯ ಉದ್ಘಾಟನೆಯು ಜು.10ರ ಬೆಳಗ್ಗೆ 11ಕ್ಕೆ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಆಯೋಜಿಸಿರುವ ಅನ್ನಭಾಗ್ಯ ಯೋಜನೆಯನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸುವರು.
ಶಾಸಕ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸುವರು. ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಜಿ.ಪಂ. ಪ್ರಭಾರಿ ಅಧ್ಯಕ್ಷೆ ಎಸ್.ಬಿ.ಗೌರಮ್ಮ, ಶಾಸಕರಾದ ಸಿ.ಪಿ.ಯೋಗೇಶ್ವರ್, ಎಚ್.ಸಿ.ಬಾಲಕೃಷ್ಣ, ಕೆ.ಶ್ರೀನಿವಾಸಮೂರ್ತಿ, ವಿಧಾನಪರಿಷತ್ ಸದಸ್ಯರಾದ ರಾಮಚಂದ್ರಗೌಡ, ಎಂ.ವಿ.ರಾಜಶೇಖರನ್, ಪುಟ್ಟಣ್ಣ, ಇ.ಕೃಷ್ಣಪ್ಪ, ಸೈಯದ್ ಮದೀರ್ ಆಗಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಸವರಾಜು ಭಾಗವಹಿಸುವರು.