ಗ್ರಂಥಾಲಯ ತರಬೇತಿ
ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆ 2013-14ನೇ ಸಾಲಿಗೆ ನಡೆಸಲಿರುವ ಗ್ರಂಥಾಲಯ ತರಬೇತಿ ಸರ್ಟಿಫಿಕೆಟ್ ಕೋರ್ಸ್ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹಾಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಡಿ ಕೆಲಸ ನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರು, ಗ್ರಾಮಪಂಚಾಯ್ತಿ ಗ್ರಂಥಾಲಯಗಳ ಮೇಲ್ವಿಚಾರಕರು ಅರ್ಜಿ ಸಲ್ಲಿಸಲು ಬಯಸಿದಲ್ಲಿ ಅವರು ಕಾರ್ಯನಿರ್ವಹಿಸುತ್ತಿರುವ ಕಚೇರಿ ಉಪನಿರ್ದೇಶಕರು/ ಮುಖ್ಯ ಗಂಥಾಲಯಾಧಿಕಾರಿಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಯ ಜತೆಗೆ ಅಭ್ಯರ್ಥಿಯ ಎಸ್ಎಸ್ಎಲ್ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಸೇವೆಗೆ ಸೇರಿದ ದಿನಾಂಕ ವೇತನ ಪ್ರಮಾಣ ಪತ್ರ, ನಡತೆ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿ ಲಗತ್ತಿಸಿ ಜು. 31ರೊಳಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಅಂಬೇಡ್ಕರ್ ವೀದಿ, ಬೆಂಗಳೂರು 560001 ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.
ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನ
ಬೆಂಗಳೂರು: ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ 2013-14ನೇ ಸಾಲಿನಲ್ಲಿ ನಡೆಸುತ್ತಿರುವ ಡಿಪ್ಲೊಮಾ ಸಿನಿಮಾಟೋಗ್ರಫಿ ಮತ್ತು ಸೌಂಡ್ ರೆಕಾರ್ಡಿಂಗ್ ಅಂಡ್ ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪಿಯುಸಿಯಲ್ಲಿ ಉತೀರ್ಣರಾಗಿರುವವರು ಜು. 27ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 28466768 ಸಂಪರ್ಕಿಸಬಹುದು.
ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜ್ಞಾನ ಮಂದಾರಾ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 85 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಜ್ಞಾನಶ್ರೀ ಪ್ರಶಸ್ತಿ ಮತ್ತು ಭರತನಾಟ್ಯ, ಸಂಗೀತ, ಜನಪದ ಯಕ್ಷಗಾನ, ಕ್ಷೇತ್ರಗಳಲ್ಲಿ ಸಾಧನೆಗೈದ 12ರಿಂದ 18 ವರ್ಷದ ಮಕ್ಕಳಿಗೆ ಅರಳುಮಲ್ಲಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಮಾಹಿತಿಗೆ 94487 630655 ಸಂಪರ್ಕಿಸಿ.
ಕೌಶಲ್ಯಾಭಿವೃದ್ಧಿ ತರಬೇತಿ
ರಾಮನಗರ: ನೊಂದಾಯಿತ ಸ್ವಯಂ ಸೇವಾ ಸಂಸ್ಥೆಯಾದ ಜ್ಞಾನಭಾರತಿ ಶಿಕ್ಷಣ ಮತ್ತು ಅಭಿವೃದ್ಧಿ ಸಂಸ್ಥೆಯು ಸ್ಕ್ರೀನ್ ಪ್ರಿಂಟಿಂಗ್, ಟೈಲರಿಂಗ್, ಕ್ಯಾಂಡಲ್, ಪೇಪರ್ ಬ್ಯಾಗ್, ಗಿಫ್ಟ್ ಬ್ಯಾಗ್, ಸ್ಟ್ರಾಬೋರ್ಡ್ ಪೇಪರ್ ಪೈಲ್, ಸ್ಪೈರಲ್ ಬೈಂಡಿಂಗ್, ಸ್ಕ್ರಿಬಲಿಂಗ್ ನೋಟ್ ಬುಕ್, ಎನ್ವಲಪ್ ಕವರ್, ಫೋಟೋ ಲ್ಯಾಮಿನೇಷನ್, ಪೆನಾಯಿಲ್, ಸೋಪ್ ಆಯಿಲ್ ಮುಂತಾದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ರಿಯಾಯಿತಿ ದರದಲ್ಲಿ ನೀಡಲಿದೆ. ಆಸಕ್ತರು ತಮ್ಮ ಹೆಸರು ಮತ್ತು ವಿಳಾಸವನ್ನು ಯೋಜನಾ ಸಂಯೋಜನಾಧಿಕಾರಿ, ಜ್ಞಾನಭಾರತಿ ಶಿಕ್ಷಣ ಮತ್ತು ಅಭಿವೃದ್ಧಿ ಸಂಸ್ಥೆ, ನಂ.4376, ಶ್ರೀರಾಮ ಥಿಯೇಟರ್ ಎದುರು, ಶೆಟ್ಟಹಳ್ಳಿ ಬೀದಿ ರಸ್ತೆ, ರಾಮನಗರ ಇಲ್ಲಿ ನೋಂದಾಯಿಸಿಕೊಂಡು ತರಬೇತಿ ಪಡೆಯಬಹುದು.
ಪರೀಕ್ಷೆಗಳಿಗೆ ತರಬೇತಿ
ರಾಮನಗರ: ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ವಿವಿಧ ಬ್ಯಾಂಕ್ಗಳ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಆಯೋಜಿಸಿದೆ. ನ್ಯಾಷನಲ್ ಇನ್ಸುರೆನ್ಸ್, ಆರ್ಬಿಐ ಹಾಗೂ ಆರ್ಆರ್ಬಿ ಅಸಿಸ್ಟೆಂಟ್ ಹುದ್ದೆಗಳಿಗೆ ತರಬೇತಿ ನೀಡಲಾಗುತ್ತದೆ. ಆಸಕ್ತರು ಜು.9ರೊಳಗೆ ಕರಾಮುವಿದ ಮುಕ್ತಗಂಗೋತ್ರಿ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10ರಿಂದ 4ರವರೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ.0821-2515944 ಸಂಪರ್ಕಿಸಬಹುದು.
ಅರ್ಜಿ ಆಹ್ವಾನ
ಬೆಂಗಳೂರು: ಶಿರಡಿ ಸಾಯಿ ಸೇವಾ ಟ್ರಸ್ಟ್ ನಡೆಸುತ್ತಿರುವ ಸಾಯಿ ಹೆಲ್ತ್ ಕೇರ್ ಸೆಂಟರ್ ವೃದ್ಧಾಶ್ರಮಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್-93437 94138 ಸಂಪರ್ಕಿಸಬಹುದು.
ಮಹಾಸಭೆ ಇಂದು
ದೊಡ್ಡಬಳ್ಳಾಪುರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕು ಆಫೀಸರ್ಸ್ ಅಸೋಸಿಯೇಷನ್ನ 2011-12 ಮತ್ತು 2012-13ನೇ ಸಾಲುಗಳ ಸರ್ವ ಸದಸ್ಯರ ಮಹಾಸಭೆ ಜು.7ರ ಭಾನುವಾರ ಬೆಳಗ್ಗೆ 11 ಗಂಟೆಗೆ ಅಸೋಸಿಯೋಷನ್ ಸಭಾಂಗಣದಲ್ಲಿ ನಡೆಯಲಿದೆ. ಅಸೋಸಿಯೇಷನ್ ಅಧ್ಯಕ್ಷ ಎಂ.ಪುಟ್ಟಲಿಂಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ದಿನ ಸಂಸ್ಥೆಯ ನೂತನ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳ ಆಯ್ಕೆ ಚುನಾವಣಾ ಪ್ರಕ್ರಿಯೆ ಕೂಡ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅರ್ಚಕರ ನೇಮಕ
ನೆಲಮಂಗಲ: ಪಟ್ಟಣದ ಮೇಗಲಪೇಟೆ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಅರ್ಚಕರ ನೇಮಿಸಿಕೊಂಡು ದೇವಸ್ಥಾನದಲ್ಲಿ ಪ್ರತಿನಿತ್ಯ ಪೂಜಾಕಾರ್ಯ ನೆರವೇರಿಸಲಾಗುವುದು ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಹಾಯ ಆಯುಕ್ತರಾದ ಲಕ್ಷ್ಮೀ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ರಾಮನಗರ: 2013-14ನೇ ಸಾಲಿಗಾಗಿ 1ನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾವರೆಗೆ, ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನ ಹಾಗೂ ಪಿಂಚಣಿ ಇಲ್ಲದ ರಾಜ್ಯದ ಹಾಗೂ ಪಿಂಚಣಿ ಪಡೆಯುತ್ತಿರುವ ಹೊರ ರಾಜ್ಯದ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ-58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು-25, ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.30ರೊಳಗೆ ಸಲ್ಲಿಸಬೇಕು. ಅಂಚೆ ಮೂಲಕ ಅರ್ಜಿ ಪಡೆಯಲಿಚ್ಛಿಸುವವರು ರು.5ರ ಅಂಚೆ ಚೀಟಿಯುಳ್ಳ ಸ್ವಯಂ ವಿಳಾಸದ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.080-25588718 ಸಂಪರ್ಕಿಸಬಹುದು.
ನಾಳೆ ಸಂವಾದ
ರಾಮನಗರ: ಬೆಂಸ್ಕಾಂನಿಂದ ಜು.8ರಂದು ಮಧ್ಯಾಹ್ನ 3ಕ್ಕೆ ಬಿಡದಿ ಉಪ ವಿಭಾಗ ಕಚೇರಿಯಲ್ಲಿ ಗ್ರಾಹಕ ಸಂವಾದ ಸಭೆ ಏರ್ಪಡಿಸಲಾಗಿದೆ. ಬಿಡದಿ ಉಪ ವಿಭಾಗ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರು ಸಂವಾದ ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಬಿಡದಿ ಉಪವಿಭಾಗದ ಎಇಇ ತಿಳಿಸಿದ್ದಾರೆ.
ಆನ್ಲೈನ್ ಅರ್ಜಿ
ರಾಮನಗರ: ಕೇಂದ್ರ ಲೋಕಸೇವಾ ಆಯೋಗವು ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಮೂಲಕ ಪರೀಕ್ಷಾ ಪೂರ್ವ ತರಬೇತಿ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆನ್ಲೈನ್ ಮೂಲಕ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜು.20 ಕಡೆಯ ದಿನ. ವಿವರಗಳಿಗೆ ಇಲಾಖೆ ವೆಬ್ಸೈಟ್ ವೀಕ್ಷಿಸಿ.