ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ದೊಡ್ಡಬಳ್ಳಾಪುರ: ಇಲ್ಲಿನ ಟಿಎಂಸಿ ಬ್ಯಾಂಕ್ ತನ್ನ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದೆ. ಬ್ಯಾಂಕಿನ ಸುವರ್ಣ ವರ್ಷ ಸಂಭ್ರಮದ ಹಿನ್ನಲೆಯಲ್ಲಿ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದು ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಗುವುದು. ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳು ತಮ್ಮ ವಿವರಗಳನ್ನು ಬ್ಯಾಂಕಿನ ವ್ಯವಹಾರದ ವೇಳೆಯಲ್ಲಿ ವ್ಯವಸ್ಥಾಪಕರಿಗೆ ಸಲ್ಲಿಸಬೇಕಾಗಿ ಕೋರಲಾಗಿದೆ. ಬ್ಯಾಂಕಿನ ಸದಸ್ಯರ ಮಕ್ಕಳಾಗಿದ್ದು 2013ರ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಯಾಗಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿಗಳಲ್ಲಿ ಜು.15ರಿಂದ 31ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಷೇರು ಮೊತ್ತ ಪಾವತಿಸಿ: ಬ್ಯಾಂಕಿನ ಸದಸ್ಯರಾಗಿದ್ದು ಹೆಚ್ಚುವರಿಯಾಗಿರುವ ಷೇರಿನ ಮೊತ್ತವನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಸದಸ್ಯರು ಉಳಿಕೆ ಮೊತ್ತವನ್ನು ಸೆ.9ರೊಳಗೆ ಪಾವತಿಸಿ ಸದಸ್ಯತ್ವವನ್ನು ಸಿಂಧುಗೊಳಿಸಿಕೊಳ್ಳಬೇಕು ಎಂದು ಅಧ್ಯಕ್ಷ ಕೆ.ಪಿ.ವಾಸುದೇವ್ ಹೇಳಿದ್ದಾರೆ.