'ಅಕ್ರಮ ಮದ್ಯ ಮಾರಾಟಕ್ಕೆ ಕಠಿಣ ಕ್ರಮ'
ಚನ್ನಪಟ್ಟಣ: ಪ್ರತಿ ಗ್ರಾಮಗಳಲ್ಲಿ ಎಲ್ಲ ಅಂಗಡಿ ಮುಗ್ಗಟ್ಟಿನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಇದು ಕಾನೂನು ಬಾಹಿರವಾಗಿದ್ದು, ತಪ್ಪಿತಸ್ಥರು ಯಾರೇ ಆಗಿದ್ದರು ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು. ತಾಲೂಕಿನ ಮುನಿಯಪ್ಪನದೊಡ್ಡಿ ಸರ್ಕಾರಿ ಆರ್.ಎಂ.ಎಸ್.ಎ. ಪ್ರೌಢಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪೋಷಕರ ಮನಮೊಲಿಸಿ ಮದ್ಯಪಾನ ಮಾಡದಂತೆ ಮನವರಿಕೆ ಮಾಡಿಸಬೇಕೆಂದು ಕರೆ ನೀಡಿದರು. ಮುನಿಯಪ್ಪನದೊಡ್ಡಿ ಪ್ರೌಢಶಾಲೆಗೆ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಅಡಿಯಲ್ಲಿ ಎಪ್ಪತ್ತೆರಡು ಲಕ್ಷ ಮಂಜೂರಾಗಿದ್ದು, 10 ಕೊಠಡಿಗಳು ನಿರ್ಮಾಣವಾಗಲಿದೆ ಎಂದು ತಿಳಿಸಿದರು. ಶಾಲೆಯು ಮೊದಲು ಗುಡಿಸಲಿನಲ್ಲಿ ತರಗತಿ ನಡೆಯುತ್ತಿದ್ದು, ಇಂದು ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ ಎಂದರು.