ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಬಾಲಕೃಷ್ಣ ದಿಢೀರ್ ಭೇಟಿ
ಕ.ಪ್ರ. ವಾರ್ತೆ, ಮಾಗಡಿ, ಜು.8-
ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಚ್.ಸಿ. ಬಾಲಕೃಷ್ಣ ಆಸ್ಪತ್ರೆಯಲ್ಲಿನ ಸಮಸ್ಯೆ ಕುರಿತು ವೈದ್ಯಾಧಿಕಾರಿ ಕೆ.ಎಸ್. ಪ್ರಕಾಶ್ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವೈದ್ಯರು ಮತ್ತು ಸಿಬ್ಬಂದಿಗಳು ವರ್ತಿಸಬೇಕು. ಸೇವಾ ಮನೋಭಾವ ಇರಲಿ, ರಕ್ತ, ಮಲ, ಇತರೆ ಪರೀಕ್ಷೆಯನ್ನು ಆಸ್ಪತ್ರೆಯಲ್ಲಿಯೇ ಮಾಡಬೇಕು. ಆಸ್ಪತ್ರೆಯಲ್ಲಿ ಮೂಲಭೂತ ಸಮಸ್ಯೆಗಳಿದ್ದರೆ ಕೂಡಲೆ ಮಾಹಿತಿ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದರು. ತಾಲೂಕಿನ ಮಳೆ ಪ್ರಮಾಣ ಕಡಿಮೆಯಾಗಿದ್ದು, ಡೆಂಘಿಯಿಂದ ಕೆಲವರು ಮೃತಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಭೇಟಿ ಮಾಹಿತಿ ಪಡೆದಿರುವುದಾಗಿ ಶಾಸಕ ಎಚ್.ಸಿ. ಬಾಲಕೃಷ್ಣ ವಿವರಿಸಿದರು. ಸಾಮಾನ್ಯ ರೋಗಿಗಳ ತಪಾಸಣೆಗೆ ವೈದ್ಯರು ದಿನದ 24 ಗಂಟೆ ಸೇವೆ ನೀಡುವಂತೆ ಆದೇಶಿಸಿರುವುದಾಗಿ ತಿಳಿಸಿದರು. ಆಸ್ಪತ್ರೆಯಲ್ಲಿನ ವೈದ್ಯರು ಉತ್ತಮ ರೀತಿಯಲ್ಲಿ ಸೇವಾ ಮನೋಭಾವದಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇರುವ ವೈದ್ಯರ ಕೊರತೆ ತಂಬಲು ಸಂಬಂಧಪಟ್ಟ ಡಿಎಚ್ಓ ಅವರಲ್ಲಿ ಚರ್ಚಿಸಿ ಆದಷ್ಟು ಬೇಗ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ವಹಿಸುತ್ತೇನೆ ಎಂದರು.