ವಿವಿಧ ಕಾಮಗಾರಿಗೆ ಶಾಸಕರಿಂದ ಚಾಲನೆ
ಕ.ಪ್ರ. ವಾರ್ತೆ ದೊಡ್ಡಬಳ್ಳಾಪುರ ಜು.8
ದೊಡ್ಡಬಳ್ಳಾಪುರ ನಗರದ ವಿವಿಧ ಬಡಾವಣೆಯಲ್ಲಿ ರಸ್ತೆ, ಕೊಳವೆ ಬಾವಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಟಿ.ವೆಂಕಟರಮಣಯ್ಯ ಸೋಮವಾರ ಚಾಲನೆ ನೀಡಿದರು.
ಇಲ್ಲಿನ ಕಚೇರಿಪಾಳ್ಯ ಮುಖ್ಯರಸ್ತೆಗೆ ಕಾಂಕ್ರೀಟ್ ಹಾಕುವ ಕಾಮಗಾರಿಗೆ ಚಾಲನೆ ನೀಡಿದ ಅವರು, ನಗರದಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಿದೆ. ಮುಖ್ಯವಾಗಿ ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಹೆಚ್ಚಿನ ಶ್ರಮವಹಿಸಬೇಕಿದೆ. ಹಂತ ಹಂತವಾಗಿ ಯೋಜನೆಗಳನ್ನು ಜಾರಿಗೊಳಿಸಲು ಶ್ರಮಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಕಾಂಗ್ರೆಸ್ ಮುಖಂಡರಾದ ತಿ.ರಂಗರಾಜು, ಡಾ.ನಾರಾಯಣ್, ಜವಾಜಿ ಸೀತಾರಾಂ, ಡಿ.ವಿ.ಅಶ್ವತ್ಥಪ್ಪ, ಬೈರೇಗೌಡ, ಕೆ.ಜಿ.ಅಶೋಕ್, ಎಚ್.ಎಸ್.ರೇವತಿ, ನಗರಸಭಾ ಸದಸ್ಯ ಆರ್.ಗೋವಿಂದರಾಜು, ಮಲ್ಲಿಕಾರ್ಜುನ್ ಮತ್ತಿತರರು ಭಾಗವಹಿಸಿದ್ದರು.