ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಅಧಿಸೂಚನೆ
ರಾಮನಗರ: ರಾಜ್ಯ ಸರ್ಕಾರಿ ನೌಕರರ ಸಂಘದ 2013-18ರ ಅವಧಿಗೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ. ನಾಮಪತ್ರ ಸಲ್ಲಿಸಲು ಜು.15 ಕಡೆಯ ದಿನವಾಗಿದೆ. ಅದೇ ದಿನ ಸಂಜೆ 5ರ ನಂತರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜು.16 ನಾಮಪತ್ರ ವಾಪಸ್ಪ್‌ಡೆಯಲು ಕಡೆಯ ದಿನ. ಜು.22ರ ಸೋಮವಾರ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 4.30ಕ್ಕೆ ಮತ ಎಣಿಕೆ ನಡೆಯಲಿದ್ದು ನಂತರ ಫಲಿತಾಂಶ ಪ್ರಕಟಿಸಲಾಗುವುದು. ನಾಮಪತ್ರಗಳನ್ನು ಸಂಘದ ಜಿಲ್ಲಾ ಕಚೇರಿಯಲ್ಲಿ ವಿತರಣೆ ಮಾಡಲಾಗುವುದು. ಚುನಾವಣಾ ಪ್ರಕ್ರಿಯೆ ಸಂಬಂಧ ಸಂಘದ ಕಚೇರಿಯು ರಜಾ ದಿನಗಳಂದು ಸಹ ತೆರೆದಿರುತ್ತದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಪಿ.ಜಯರಾಂ ತಿಳಿಸಿದ್ದಾರೆ.