ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ಶಿಕ್ಷಕರ ಸಮಸ್ಯೆ ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಲು ನಾಯಕತ್ವ ಅಗತ್ಯ'

Rashmi Kasaragodu
Updated On : 13 Jul 2013, 12:50 pm

ಮಾಗಡಿ: ಸಮಾಜವನ್ನು ತಿದ್ದುವ ಶಿಕ್ಷಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಮಸ್ಯೆ ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಲು ನಾಯಕತ್ವ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಕ್ಷೇತ್ರದಿಂದ ತಾಲೂಕು ನೌಕರರ ಸಂಘದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ ಎಂದು ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್. ಜಯರಾಂ ನುಡಿದರು.
ಅವರು ಶುಕ್ರವಾರ ಮಾಗಡಿ ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಕರು, ತಮ್ಮ ಸೇವಾ ಅವಧಿಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜತೆಗೆ ಯೋಜನೆಗಳ ಸೌಲತ್ತುಗಳಿಂದಲೂ ಸಹ ವಂಚಿತರಾಗುತ್ತಿದ್ದಾರೆ. ಅವರಿಗೆ ಕಾನೂನು ಬದ್ಧ ಸೌಲತ್ತುಗಳನ್ನು ಕೊಡಿಸಲು, ಸಮಸ್ಯೆಗಳಿಗೆ ಸ್ಪಂದಿಸಲು ಶಿಕ್ಷಕರ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಬಯಸಿ ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರದ ಶಿಕ್ಷಕರು ಸಹ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯದ ಮೇರೆಗೆ, ಅವರ ಪ್ರೀತಿ ವಿಶ್ವಾಸಕ್ಕೆ ಸೋತು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಕ್ಷೇತ್ರದ ಎಲ್ಲಾ ಶಿಕ್ಷಕ ಬಂಧುಗಳು ಸಹಕಾರ ಮತ್ತು ಪ್ರೋತ್ಸಾಹ ನೀಡುವುದರ ಮೂಲಕ ನನಗೆ ಮೊದಲ ಪ್ರಾಶಸ್ತ್ಯ ನೀಡಿ ಬಹುಮತದಿಂದ ಆಯ್ಕೆ ಮಾಡುವಂತೆ ಕೋರುತ್ತಿದ್ದೇನೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಮಲ್ಲೂರು ಲೋಕೇಶ್ ಮಾತನಾಡಿ ಶಿಕ್ಷಕರ ಆಶೀರ್ವಾದಿಂದ ಅನೇಕ ಸಮಸ್ಯೆಗಳಿಗೆ ಸ್ಪಂಧಿಸಿದ್ದೇನೆ. ಹಲವಾರು ಸಮಸ್ಯೆಗಳನ್ನು ನಿವಾರಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಮತ್ತೆ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಲು ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.ಅವರ ಪ್ರೀತಿ ವಿಶ್ವಾಸಕ್ಕೆ ಚಿರಋಣಿಯಾಗಿದ್ದೇನೆ, ಶಿಕ್ಷಕರ ಕ್ಷೇತ್ರದಿಂದ ಮೂರು ಮಂದಿ ಪ್ರತಿನಿಧಿಗಳ ಆಯ್ಕೆಯಾಗಬೇಕಿದ್ದು, ನಾನು, ಬಿ.ಎನ್. ಜಯರಾಂ ಹಾಗು ಪರಮೇಶ್ವರಯ್ಯ ಸಿಂಡಿಕೇಟ್ ಮಾಡಿಕೊಂಡಿದ್ದು, ನಮ್ಮನ್ನೇ ಆಯ್ಕೆ ಮಾಡುವಂತೆ ಶಿಕ್ಷಕ ವೃಂದದಲ್ಲಿ ಕೋರುತ್ತೇನೆ ಎಂದರು. ಮೂರ್ತಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement