ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕನ್ನಡ ಭಾಷೆ, ನೆಲ ಸಂರಕ್ಷಿಸುವುದೇ ನಮ್ಮೆಲ್ಲರ ಗುರಿ

Mainashree
Updated On : 13 Jul 2013, 11:37 am

ಕ.ಪ್ರ.ವಾರ್ತೆ  ನೆಲಮಂಗಲ  ಜು.13
ಕನ್ನಡ ನಾಡಿನ ಭಾಷೆ, ನೆಲ, ಜಲ ಪರಿಸರ ಸಂರಕ್ಷಿಸುವುದೇ ನಮ್ಮೆಲ್ಲರ ಗುರಿಯಾಗಿದೆ ಎಂದು ಜಯಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಬಿ.ಎಸ್.ಜಗದೀಶ್ ತಿಳಿಸಿದರು.
ಅವರು ಶನಿವಾರ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ  ತಾಲೂಕು ಜಯ ಕರ್ನಾಟಕ ವೇದಿಕೆ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡುತ್ತಾ  ಸಮಾಜದಲ್ಲಿ ಯುವಕರು ಪರಿಸರದ ಬಗ್ಗೆ ಕಾಳಜಿ ವಹಿಸಿ ನಾಶವಾಗುತ್ತಿರುವ ನಮ್ಮ ಪರಿಸರವನ್ನು ರಕ್ಷಿಸಲು ಸಸಿಗಳನ್ನು ನೆಟ್ಟು ಪೋಷಿಸಿ ಬೆಳೆಸುವ ಕರ್ತವ್ಯ ನಿರ್ವಹಿಸಬೇಕು ಎಂದರು. ಈ ನಾಡಿನ ಶಿಕ್ಷಣ ಪ್ರೇಮಿಗಳು ಸರ್ಕಾರಿ ಶಾಲೆಗಳು ಮುಚ್ಚದಂತೆ ಹೋರಾಟ ನಡೆಸಬೇಕು. ಶಾಲೆಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ದೊರಕಿಸಿಕೊಡಬೇಕು. ಸರ್ಕಾರಿ ಶಾಲೆಗಳಲ್ಲಿ ಹಾಗೂ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದವರಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement