ಕಾಡಾನೆ ದಾಳಿಗೆ ವ್ಯಕ್ತಿ ಸಾವು
ಮಾಗಡಿ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲೂಕಿನಲ್ಲಿ ಶನಿವಾರ ನಡೆದಿದೆ. ತಾಲೂಕಿನ ಜೋಡಗಟ್ಟೆ ವಾಸಿ ಯಳವಯ್ಯ(55) ದಾಳಿಗೆ ಬಲಿಯಾದ ವ್ಯಕ್ತಿ. ಮಾಗಡಿ ತಾಲೂಕಿನ ಪ್ರಸಿದ್ಧ ಸಾವನದುರ್ಗದ ಅಭಯಾರಣ್ಯ ಪ್ರದೇಶದ ತಪ್ಪಲಿನಲ್ಲಿರುವ ಜೋಡಗಟ್ಟೆ ಗ್ರಾಮದ ವಾಸಿ ಯಳವಯ್ಯ ದನ ಮೇಯಿಸುತ್ತಿದ್ದಾಗ ಕಾಡಾನೆ ದಾಳಿ ನಡೆಸಿ, ತನ್ನ ಕೋರೆಯಿಂದ ತಿವಿದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾರೆ.