ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜಾತಿ, ಭಾಷೆ ಹೆಸರಿನಲ್ಲಿ ಕಚ್ಚಾಟ ಬೇಡ

Mainashree
Updated On : 14 Jul 2013, 12:37 pm

ಕ.ಪ್ರ.ವಾರ್ತೆ  ರಾಮನಗರ  ಜು.13
ಜಾತಿ, ಭಾಷೆ ಹೆಸರಿನಲ್ಲಿ ಕಚ್ಚಾಟ ನಡೆಸುವುದನ್ನು ಬಿಟ್ಟು, ದೇಶವನ್ನು ಕಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮುಂದಾಗಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ದಿನೇಶ್ ಗುಂಡೂರಾವ್ ಜನತೆಗೆ ಕರೆ ನೀಡಿದ್ದಾರೆ.
ನಗರದ ಕೃಷ್ಣಸ್ಮೃತಿ ಕಲ್ಯಾಣ ಮಂದಿರದಲ್ಲಿ ರಾಮನಗರ ರೋಟರಿ ಸಂಸ್ಥೆ ಆಯೋಜಿಸಿದ್ದ 2013-14ನೇ ಸಾಲಿನ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಆರೋಗ್ಯ, ಶಿಕ್ಷಣದ ಪ್ರಗತಿ ಮತ್ತು ಮೂಲಭೂತ ಸಮಸ್ಯೆ ನಿವಾರಣೆ ಅತ್ಯಂತ ಪ್ರಮುಖವಾದುದಾಗಿದೆ ಎಂದರು. ಪೊಲಿಯೋ, ಏಡ್ಸ್‌ನಂತಹ ಮಾರಕ ರೋಗಗಳು ನಾಗರಿಕ ಸಮಾಜವನ್ನು ಕಾಡುತ್ತಿವೆ. ಇಂತಹ ಸಮಸ್ಯೆಗಳನ್ನು ತೊಡೆದುಹಾಕಲು ಸಾಮಾಜಿಕ ಕ್ಷೇತ್ರದಲ್ಲಿ ಪರೋಪಕಾರಿ ಮನೋಭಾವದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಸಮೃದ್ಧ ಮತ್ತು ಸದೃಢ ಕರ್ನಾಟಕ ನಿರ್ಮಾಣಕ್ಕೆ ಪ್ರಗತಿಪರ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ.
ಸಮಾಜದ ಅಭಿವೃದ್ಧಿಗೆ ಮಾರಕವಾಗಿರುವ ಮೂಢನಂಬಿಕೆಗಳನ್ನು ಮುಗ್ಧ ಜನರ ಮನಸ್ಸಿನಿಂದ ದೂರಸರಿಸಿ, ಅವರಲ್ಲಿ ನೈತಿಕತೆಯ ಅರಿವು ಮೂಡಿಸಬೇಕಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement