ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ನಿಷ್ಠಾವಂತ ಹುಡುಗರ ನೇಮಕ: ಶಾಸಕ ಶ್ರೀನಿವಾಸಮೂರ್ತಿ

Mainashree
Updated On : 13 Jul 2013, 11:36 am

ಕ.ಪ್ರ.ವಾರ್ತೆ  ನೆಲಮಂಗಲ  ಜು.13
ಸರ್ಕಾರದಿಂದ ಸಿಗಬಹುದಾದ ಯೋಜನೆಗಳನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಲು ನಿಷ್ಠಾವಂತ 10 ಮಂದಿ ಹುಡುಗರನ್ನು ನೇಮಕ ಮಾಡಲಾಗಿದೆ ಎಂದು ಶಾಸಕ ಡಾ..ಕೆ.ಶ್ರೀನಿವಾಸಮೂರ್ತಿ ತಿಳಿಸಿದರು.
ತಾಲೂಕಿನ ಶಿವಗಂಗೆ ಗ್ರಾ.ಪಂ. ಆವರಣದಲ್ಲಿ ಸಾರ್ವಜನಿಕರ ಕುಂದು ಕೊರತೆ ನಿವಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಾಮಾನ್ಯ ಜನರಿಗೆ ದೊರಕಬಹುದಾದ ಪಡಿತರ ಚೀಟಿ ವೃದ್ಧಾಪ್ಯ ವೇತನ, ಅಂಗವಿಕಲರ ವೇತನ, ಸಂಧ್ಯಾಸುರಕ್ಷಾ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳಿಗೆ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಈ ರೀತಿಯ ದೂರುಗಳು ಬಂದರೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುತ್ತದೆ ಎಂದರು.
ಶಿವಗಂಗೆ ಬೆಟ್ಟದಲ್ಲಿ ಪ್ರತಿ ಹುಣ್ಣಿಮೆಯಂದು ಗಿರಿ ಪ್ರದಕ್ಷಿಣೆಗೆ ನಡೆಸುವ ಭಕ್ತರ ಸಂಚಾರಕ್ಕೆ ಸರಿಯಾದ ರಸ್ತೆಯಿಲ್ಲ. ಶೀಘ್ರವಾಗಿ ಈ ಭಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಶಾಸಕರ ಅನುದಾನ ನೀಡುವುದಾಗಿ ತಿಳಿಸಿದರು.
ಶಿವಗಂಗೆ ಗ್ರಾ.ಪಂ.ಉಪಾಧ್ಯಕ್ಷ ಹೊನ್ನಗಂಗಶೆಟ್ಟಿ ಮಾತನಾಡಿ, ನಮ್ಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಡತನ ರೇಖೆ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಇವರಿಗೆ ಸರ್ಕಾರಿ ಜಾಗದಲ್ಲಿ ಘಂಟೆಹೊಸಹಳ್ಳಿ, ಶಿವಗಂಗೆ, ಗೊಟ್ಟಿಗೆರೆಗಳಲ್ಲಿ ನಿವೇಶನ ನೀಡಬೇಕೆಂದು ಒತ್ತಾಯಿಸಿದರು. ಹಾಗೆಯೇ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶೀಘ್ರ ಕೊಳವೆ ಬಾವಿ ಕೊರೆಯಿಸಬೇಕು ಎಂದು ಮನವಿ ಮಾಡಿದರು.
ಶಿವಗಂಗೆ ಗ್ರಾ.ಪಂ.ಅಧ್ಯಕ್ಷೆ ಜಾನಕಮ್ಮ ಜಯಣ್ಣ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಸದಸ್ಯರಾದ ಎಸ್.ಟಿ.ಸಿದ್ದರಾಜು, ಮರಿಯಪ್ಪ, ಜಗಜ್ಯೋತಿ ಬಸವೇಶ್ವರ, ಪರಮೇಶ್, ಮುಖಂಡರಾದ ಮೋಹನ್‌ಕುಮಾರ್, ಶ್ರೀನಿವಾಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement